ಆಗಸ್ಟ್ 7 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ನೇರ ಸಂದರ್ಶನ

ಹಂಚಿಕೊಳ್ಳಿ
WhatsApp Facebook X Telegram
Shivamogga Job ಸಾಂದರ್ಭಿಕ ಚಿತ್ರ
Shivamogga Jobಸಾಂದರ್ಭಿಕ ಚಿತ್ರ

IndusInd Bank Jobs / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 07 ರಂದು ಬೆಳಿಗ್ಗೆ 10 ಗಂಟೆಗೆ ಖಾಸಗಿ ರಂಗದ ಪ್ರಮುಖ ಬ್ಯಾಂಕ್ ಆದ ಇಂಡಸ್‌ಲ್ಯಾಂಡ್ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ವಾರ್ತಾ ಇಲಾಖೆಯ ಮೂಲಕ ಪ್ರಕಟಣೆಯನ್ನು ನೀಡಲಾಗಿದೆ.

ಮಾಹಿತಿ ಮತ್ತು ನಿಯಮಗಳು

ಎಸ್ ಎಸ್ ಎಲ್ ಸಿ, ಪಿಯುಸಿ ಅಥವಾ ಯಾವುದೇ ಪದವಿ ತೇರ್ಗಡೆಯಾದ ಭಾಗವಹಿಸಬ18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು

ಈ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ,ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್,ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ‌ ಸಂದರ್ಶನ ನಡೆಯಲಿದೆ.

ನೇರ ಸಂದರ್ಶನದ ಕುರಿತು ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606, 9108235132 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor