ಮಾಜಿ ಸಿಎಂಗೆ Z Plus ಭದ್ರತೆ ನೀಡಿ! ಕೇಂದ್ರ ಗುಪ್ತಚರ ಇಲಾಖೆ ಸೂಚನೆ!

Malenadu Today

KARNATAKA NEWS/ ONLINE / Malenadu today/ Oct 27, 2023 SHIVAMOGGA NEWS

BENGALURU/   ಮಾಜಿ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಗುಪ್ತದಳ ನಿರ್ದೇಶನ ನೀಡಿದೆ. ಈ ಬಗ್ಗೆ ರಾಜ್ಯಮಟ್ಟದ ಸುದ್ದಿಪತ್ರಿಕೆ ವರದಿ ಮಾಡಿದೆ. ವರದಿಯ ಪ್ರಕಾರ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಅವರ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ  ಯಡಿಯೂರಪ್ಪ ಅವರಿಗೆ ಸೆಪ್ಟೆಂಬರ್ ತನಕ ಝಡ್ ಪ್ಲಸ್ ಭದ್ರತೆ ನೀಡುವಂತೆ ಗುಪ್ತಚರ ಇಲಾಖೆ ತಿಳಿಸಿದೆ

READ : ಸರ್ಕಾರಿ ಶಾಲೆಯಲ್ಲಿ ಎಸ್​.ಬಂಗಾರಪ್ಪರವರ ಜನ್ಮದಿನ | ಹುಲಿ ಉಗುರು ಬಗ್ಗೆ ಎಚ್ಚರಿಕೆ ನೀಡಿದ ಮಧು ಬಂಗಾರಪ್ಪ

Malenadu Today

ಎಲ್ಲ ಮಾಜಿ ಮುಖ್ಯಮಂತ್ರಿಗಳಿಗೂ ಇದೇ ಶ್ರೇಣಿಯ ಭದ್ರತೆ ನೀಡಲಾಗಿತ್ತು. ಆದರೆ, ಸರ್ಕಾರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಭದ್ರತೆಯನ್ನು ವಾಪಸ್ ಪಡೆದಿತ್ತು. ಇದನ್ನ ಗಮನಿಸಿ ಕೇಂದ್ರ ಗುಪ್ತದಳ ಸರ್ಕಾರಕ್ಕೆ ಸೂಚಿಸಿದೆ. ಇನ್ನೂ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಬಿಎಸ್​ವೈ ಮನವಿ ಮಾಡಿಲ್ಲ ಎನ್ನಲಾಗಿದೆ.  

Malenadu Today

 


ಇನ್ನಷ್ಟು ಸುದ್ದಿಗಳು 

ಆಸ್ಪತ್ರೆ Appointment ಗಾಗಿ 10 ರೂಪಾಯಿ Pay ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್!

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್​ | ಸಿಕ್ತು ಮಂಗಳೂರು ಸ್ಪೇಷಲ್​ 93 ಬೀಡಿ | ಕಾರ್ಬನ್​​ ಮೊಬೈಲ್!

ಮೈಸೂರು ದಸರಾಕ್ಕೆ ಹೋಗಬೇಕಿದ್ದ ನೇತ್ರಾಳ ಪ್ರೆಗ್ನೆನ್ಸಿ ರಿಪೋರ್ಟ್​ ನೆಗೆಟಿವ್ ಇತ್ತು! ಹಾಗಾದರೆ ವಿಸ್ಮಯ ನಡೆಯಿತೆ? JP ಬರೆಯುತ್ತಾರೆ!


 

Share This Article