ರಿಪ್ಪನ್​ಪೇಟೆಯಲ್ಲಿ ನವವಿವಾಹಿತೆ ಸಾವು! ಡೆಂಗ್ಯೂ ಶಂಕೆ? ಆರೋಗ್ಯಾಧಿಕಾರಿ ಹೇಳಿದ್ದೇನು?

It has been reported that a woman has died in Ripponpete of Hosnagar taluk of Shimoga district ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್ ಪೇಟೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ

ರಿಪ್ಪನ್​ಪೇಟೆಯಲ್ಲಿ ನವವಿವಾಹಿತೆ ಸಾವು! ಡೆಂಗ್ಯೂ ಶಂಕೆ? ಆರೋಗ್ಯಾಧಿಕಾರಿ ಹೇಳಿದ್ದೇನು?

KARNATAKA NEWS/ ONLINE / Malenadu today/ Oct 8, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆಯ ನಿವಾಸಿ ನವವಿವಾಹಿತೆ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ. ಮಧುರ 31 ವರ್ಷ ಮೃತ ಮಹಿಳೆ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಈಕೆ ಅದರಿಂದಲೇ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಕುಟುಂಬಸ್ತರು ಹೇಳುತ್ತಿದ್ದಾರೆ.  

ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಇವರನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಅವರನ್ನು ಡಿಸ್ಚಾರ್ಜ್​ ಮಾಡಿಕೊಂಡು ಮನೆಗೆ ಕರೆತರಲಾಗಿತ್ತು. ಪುನಃ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಬೆನ್ನಲ್ಲೆ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲು ಕುಟುಂಬಸ್ಥರು ಮುಂದಾಗಿದ್ದಾರೆ. ಹೀಗೆ ಖಾಸಗಿ ಆಸ್ಪತ್ರೆಗೆ ಹೊರಟಾಗ ಮಹಿಳೆಯು ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. 

ತಾಳಗುಪ್ಪದವರಾದ ಮಧುರಾ ಆರು ತಿಂಗಳ ಹಿಂಧೆ ಮಂಜುನಾಥ್ ಎಂಬವರೊಂದಿಗೆ ಮದುವೆಯಾಗಿದ್ದರು. ಇನ್ನೂ ಇವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ ಜಿಲ್ಲಾ ಆರೋಗ್ಯ ಅಧಿಕಾರಿಯು  ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಹಾಗೂ ಮಹಿಳೆಗೆ ಚಿಕಿತ್ಸೆ ನೀಡಿದ ವೈದ್ಯರಿಂದ  ಮಾಹಿತಿ ಪಡೆಯುತ್ತಿದ್ದೇನೆ ಎಂದಿದ್ದಾರೆ. ಸ್ಪಷ್ಟ ಮಾಹಿತಿ ಲಭ್ಯವಾದ ನಂತರ ಮಹಿಳೆಯ ಸಾವಿನ ಕಾರಣವನ್ನು ಸ್ಪಷ್ಟಪಡಿಸಬಹುದು ಎಂದಿದ್ದಾರೆ. 


ಇನ್ನಷ್ಟು ಸುದ್ದಿಗಳು 

  1.  R M MANJUNATH GOWDA ರವರ ಮನೆಗಳ ಮೇಲೆ ED ದಾಳಿಗೆ ಕಾರಣವೇನು? ಏನಿದು ಪ್ರಕರಣ?

  2. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಮಹತ್ವದ ಪ್ರಕಟಣೆ! ಶಿವಮೊಗ್ಗದಲ್ಲಿಯೇ ನೋಂದಣಿ ಮಾಡಿಕೊಳ್ಳಿ

  3. ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ