KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಜೋಗದ ಬಳಿಯ ವಡನ್ ಬೈಲ್ ದೇವಿಗುಂಡಿಯ ಬಳಿ ಇಬ್ಬರು ನೀರು ಪಾಲಾಗಿರುವ ಘಟನೆ ಸಂಭವಿಸಿದೆ. ಈ ಬಗ್ಗೆ ಇದೀಗ ಮಾಹಿತಿ ಲಭ್ಯವಾಗಿದ್ದು, ಸಾಗರದ ಕೃಷಿ ಇಲಾಖೆಯ ಅಧಿಕಾರಿ ಕೆ.ಟಿ. ಕೃಷ್ಣಕುಮಾರ್(36) ಮತ್ತು ಎಚ್‌ಡಿಎಫ್‌ಸಿ ಬ್ಯಾಂಕಿನ ಕಲೆಕ್ಟರ್ ಅರುಣ್(28) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.
ಕುಟುಂಬ ಸಮೇತ ಇಬ್ಬರು ಅಧಿಕಾರಿಗಳು ಜೋಗ್ ಫಾಲ್ಸ್ ಪ್ರವಾಸಕ್ಕೆ ತೆರಳಿದ್ದರು ಮಧ್ಯಾಹ್ನ ಊಟ ಮಾಡಿದ ನಂತರ, ಇಬ್ಬರು ದೇವಿ ಗುಂಡಿಯಲ್ಲಿ ಈಜಾಡಲು ನೀರಿಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದ್ದು, ಇಬ್ಬರು ನೀರು ಪಾಲಾಗಿದ್ದಾರೆ.
ಕಾರ್ಗಲ್ ಪೊಲೀಸರು ಸ್ಥಳಕ್ಕೆ ತೆರಳಿ ನೀರುಪಾಲಾದ ಇಬ್ಬರ ಮೃತದೇಹವನ್ನ ಪತ್ತೆ ಮಾಡಿದ್ದಾರೆ. ಸದ್ಯ ಮೃತದೇಹವನ್ನು ಸಾಗರ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
ಇನ್ನಷ್ಟು ಸುದ್ದಿಗಳು
ಹಬ್ಬದ ದಿನ ತವರು ಮನೆಯಿಂದ ಗಂಡನ ಮನೆಗೆ ಹೋದ ಬೆನ್ನಲ್ಲೆ ಯುವತಿ ಸಾವು! ಮದುವೆಯಾಗಿ ಏಳು ತಿಂಗಳಿನಲ್ಲಿ ನಡೆದಿದ್ದೇನು?
ಚೈತ್ರಾ ಕುಂದಾಪುರ ವಿರುದ್ಧ ಟಿಕೆಟ್ ಡೀಲ್ ಕೇಸ್/ ಶಿವಮೊಗ್ಗ ನಗರದಲ್ಲಿ ಆರೋಪಿ ಮಹಜರ್! ಯಾರೆಲ್ಲಾ ಬಂದಿದ್ರು!?