ಡಿ.12 ರಂದು ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನತಾ ದರ್ಶನ! ಈ ಸಲ ಎಲ್ಲಿ ಗೊತ್ತಾ?

Malenadu Today

SHIVAMOGGA |  Dec 8, 2023 |  ಡಿ.12 ರಂಡಿ.12 ರಂದು ಜನತಾದರ್ಶನ

ಶಿವಮೊಗ್ಗ ಜಿಲ್ಲಾಡಳಿತದ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನಕ್ಕೆ ದಿನಾಂಕ ನಿಗದಿಯಾಗಿದೆ. ಈ ಸಲದ ಜನತಾ ದರ್ಶನ ಶಿಕಾರಿಪುರದಲ್ಲಿ ನಡೆಯಲಿದೆ. 

ಶಿವಮೊಗ್ಗದಲ್ಲಿ ಜನತಾ ದರ್ಶನ

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಡಿ.12 ರಂದು ಬೆಳಿಗ್ಗೆ 10.30 ರಿಂದ ಶಿಕಾರಿಪುರ ಟೌನ್ ವ್ಯಾಪ್ತಿಯ ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಶಿಕಾರಿಪುರ ತಾಲ್ಲೂಕಿನ ಸಾರ್ವಜನಿಕರು ಜನತಾದರ್ಶದಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. 

READ : ಕೇರಳದ ಕಣ್ಣೂರು ವ್ಯಕ್ತಿ ಕೊಲೆ ! ಸೊರಬ ಪೊಲೀಸರಿಂದ ಹೊಸನಗರದಲ್ಲಿ ಮೂವರು ಅರೆಸ್ಟ್​!

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಅಹವಾಲು ಸಲ್ಲಿಸಲು ಅವಕಾಶವಿರುತ್ತದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‍ಗಳನ್ನು ಪಡೆಯತಕ್ಕದ್ದು. ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿಕೆಯವರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.


 

Share This Article