ಸಚಿವರ ಉಸ್ತುವಾರಿಯಲ್ಲಿಂದು ಜನತಾ ದರ್ಶನ! ಹೇಗೆ ಸಲ್ಲಿಸಬಹುದು ಅಹವಾಲು! ಇಲ್ಲಿದೆ ವಿವರ

The Janata Darshan program will be held from Shimoga under the leadership of the minister in chargeಶಿವಮೊಗ್ಗದಲ್ಲಿಂದ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ

ಸಚಿವರ ಉಸ್ತುವಾರಿಯಲ್ಲಿಂದು  ಜನತಾ ದರ್ಶನ! ಹೇಗೆ ಸಲ್ಲಿಸಬಹುದು ಅಹವಾಲು! ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Sep 25, 2023 SHIVAMOGGA NEWS’



ಶಿವಮೊಗ್ಗ: ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 25ರ ಬೆಳಿಗ್ಗೆ 10.30ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾಕಾರಿ ಡಾ. ಆರ್.ಸೆಲ್ವಮಣಿ ತಿಳಿಸಿದ್ದಾರೆ.

 ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು ರಾಜಧಾನಿ ಬೆಂಗಳೂರಿಗೆ ಹೋಗಿ ಹಲವಾರು ರೀತಿಯ ಸಮಸ್ಯೆಗಳ ಕುರಿತು ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿ ಅಹವಾಲು ಸಲ್ಲಿಸುತ್ತಿರುವುದನ್ನು ನಿಯಂತ್ರಿಸಿ, ಸ್ಥಳೀಯ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಪರಿಹಾರ ಕ೦ಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದವರು ತಿಳಿಸಿದ್ದಾರೆ.

 ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯಾದ್ಯಂತ ಏಕಕಾಲದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮ ನಡೆಯುವ ದಿನದಂದು ಬೆಳಗ್ಗೆ 9.30ರಿಂದ ನಿಗಪಡಿಸಿದ ಸ್ಥಳದಲ್ಲಿ ಖುದ್ದು ಹಾಜರಿದ್ದು ಸಾರ್ವಜನಿಕರು ಅವಹಾಲುಗಳನ್ನು ಸಲ್ಲಿಸಬಹುದಾಗಿದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ.

ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು. ಅರ್ಜಿ ನೋಂದಾಯಿಸಿದ ನಂತರ ಟೋಕನ್ ಪಡೆದುಕೊಳ್ಳಬೇಕು. ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿಕೆಯವರಿಗೆ ಅವಕಾಶ ಕಲ್ಪಿಸಿಕೊಡುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ.

ಇನ್ನಷ್ಟು ಸುದ್ದಿಗಳು 

  1. BREAKING NEWS / ಜೋಗದ ಸಮೀಪ ನೀರಿಗಿಳಿದಿದ್ದ ಓರ್ವ ಅಧಿಕಾರಿ ಮತ್ತು ಬ್ಯಾಂಕ್ ಉದ್ಯೋಗಿ ಸಾವು! ಕಾರ್ಗಲ್​ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದ್ದೇನು?

  2. ಲೋಡ್ ಗಾಡಿಯಿಂದ ಬಿದ್ದ ಮರದ ತುಂಡು ಬಡಿದು ಬೈಕ್​ ಸವಾರನ ಸ್ಥಿತಿ ಗಂಭೀರ! ಹೀಗೂ ಆಗುತ್ತೆ ಹುಷಾರು ತಪ್ಪದಿರಿ ವಾಹನ ಸವಾರರೇ?

  3. ದೌರ್ಜನ್ಯ ಪ್ರಕರಣ ! ಶಿವಮೊಗ್ಗ ಡಿಸಿಯಿಂದ 15 ಸೂಚನೆ! ಯುವಕನ ಸಾವು, ಮರಳು, ಅಧಿಕಾರಿಗಳಿಂದ ಕಿರುಕುಳ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?