ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಸರ್ಕಾರ ಬಿಪಿಎಲ್ ಕಾರ್ಡುಗಳನ್ನು ಪರಿಷ್ಕರಣೆ ಮಾಡುತ್ತಿರುವುದರ ಜೊತೆ ಜೊತೆಗೆ , ಅಕ್ರಮವಾಗಿ ಬಿಪಿಎಲ್ ಕಾರ್ಡ್ಗಳನ್ನು ಪಡೆದವರ ವಿರುದ್ಧ ಕೇಸ್ ದಾಖಲಿಸುವುದಾಗಿ ಹೇಳಿತ್ತು. ಈ ಮಧ್ಯೆ ಶಿವಮೊಗ್ಗದಲ್ಲಿ ಅಕ್ರಮ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್ ಪಡೆದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ (Jayanagara PS Shivamogga FIR Filed BPL Card) ಈ ಪ್ರಕರಣ ದಾಖಲಾಗಿದೆ.2014 ರಿಂದ 2020 ನಡುವೆ ಅಕ್ರಮವಾಗಿ ಪಡೆದ ಬಿಪಿಎಲ್ ಕಾರ್ಡ್ಗಳ ಬಗ್ಗೆ ವಿಚಾರಣೆ ನಡೆದು ಜಿಲ್ಲಾಧಿಕಾರಿ ಸೂಚನೆ ಮೇರೆಗೆ ದೂರು ದಾಖಲಾಗಿದೆ.
ಸರ್ಕಾರಿ ದಾಖಲೆಗಳನ್ನು ಅಕ್ರಮವಾಗಿ ಸೃಷ್ಟಿಸಿ, ಆದಾಯ ತೆರಿಗೆ ಪಾವತಿದಾರರಾಗಿದ್ದರೂ ಸುಳ್ಳು ಮಾಹಿತಿ ನೀಡಿ BPL ಪಡಿತರ ಚೀಟಿ ಪಡೆದ ಆರೋಪದ ಮೇಲೆ ಶಿವಮೊಗ್ಗ ತಾಲ್ಲೂಕಿನ ಓರ್ವ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಆಹಾರ ಶಿರಸ್ತೇದಾರರಾದ ಎಲ್. ಸುನೀತ ಅವರು ದಿನಾಂಕ 02/12/2025 ರಂದು ರಾತ್ರಿ 7:30 ಗಂಟೆಗೆ ನೀಡಿದ ದೂರಿನನ್ವಯ ಜಯನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.Jayanagara PS Shivamogga FIR Filed BPL Card

ನಿವಾಸಿಯೊಬ್ಬರು, ಸೂಕ್ತ ದಾಖಲಾತಿಗಳಿಲ್ಲದೆ ಎರಡೆರಡು ಹೆಸರಿನಲ್ಲಿ ಬಿಪಿಎಲ್ ಮತ್ತು APL ಪಡಿತರ ಚೀಟಿಗಳನ್ನು ಪಡೆದು ಕಾನೂನು ಉಲ್ಲಂಘನೆ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಈ ಸಂಬಂಧ ತಹಶೀಲ್ದಾರ್ ವರದಿಯ ಆಧಾರದ ಮೇಲೆ, ಈ ಸಂಬಂಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಹಾಗೂ ಉಪನಿರ್ದೇಶಕರು ನೀಡಿದ ವರದಿಯನ್ನ ಆಧರಿಸಿ ಕಾನೂನು ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎಟಿಎಂ ಅಪ್ಡೇಟ್ ನೆಪದಲ್ಲಿ ಸಾಗರದ ಮಹಿಳೆಗ ₹2.84 ಲಕ್ಷ ವಂಚನೆ
ಏನಿದು ಪ್ರಕರಣ
ಆರೋಪಿಯು ಶಿವಮೊಗ್ಗ ತಾಲ್ಲೂಕಿನಲ್ಲಿ ಮೊದಲು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದು, ಆನಂತರ ಬೆಂಗಳೂರಿನಲ್ಲಿ ತಮ್ಮ ಮಾವನ ಹೆಸರಲ್ಲಿ ಪಡಿತರ ಚೀಟಿಯಲ್ಲಿ ತಮ್ಮ ಹೆಸರು ಸೇರಿಸಿಕೊಂಡಿದ್ದರು. ಆನಂತರ ಶಿವಮೊಗ್ಗ ತಾಲ್ಲೂಕಿನ ಕಛೇರಿಯಲ್ಲಿ, ಹೊಸ ಪಡಿತರ ಚೀಟಿಗಾಗಿ ಸಲ್ಲಿಸಿ ಅವರು ಮತ್ತೊಮ್ಮೆ ತಮ್ಮ ಪತ್ನಿಯ ಹೆಸರಲ್ಲಿ ಮಗದೊಂದು ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಿ ಹೊಸ ಕಾರ್ಡ್ ಪಡೆದುಕೊಂಡಿದ್ದರು. ಈ ಮಧ್ಯೆ ಆದಾಯ ತೆರಿಗೆ ಇಲಾಖೆಯ ಮಾಹಿತಿಯ ಹಿನ್ನೆಲೆಯಲ್ಲಿ, ಆದಾಯ ತೆರಿಗೆ ಪಾವತಿದಾರರಾಗಿರುವ ಆರೋಪಿ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಈ ಬಿಪಿಎಲ್ ಕಾರ್ಡನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತಿಸಲಾಗಿತ್ತು. ಅಲ್ಲದೆ ತಮ್ಮ ಹೆಸರಿನ ಬದಲಾವಣೆಗೆ ಬಗ್ಗೆ ಯಾವುದೇ ದಾಖಲೆ ನೀಡದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ 1860 ರಡಿ ಕಲಂ 417, 420 , 465, ಮತ್ತು 468 ಅಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಜಯನಗರ ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ.

ಟೂರಿಸ್ಟ್ಗಳಿಗೆ ಎಚ್ಚರಿಕೆ! ಹೊಸನಗರ ಈ ಸ್ಟಳಕ್ಕೆ ಹೋದರೆ ಕೇಸ್!, ಬೇಲಿ, ಬೋರ್ಡ್ ಹಾಕಿ ವಾರ್ನಿಂಗ್
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
