ವಿದ್ಯಾರ್ಥಿಗಳು, ಪೋಷಕರ ಅನುಕೂಲಕ್ಕಾಗಿ: jnnce ಯಲ್ಲಿ ಮಹತ್ವದ ಕಾರ್ಯಕ್ರಮ! ವಿವರ ಇಲ್ಲಿದೆ

ಹಂಚಿಕೊಳ್ಳಿ
WhatsApp Facebook X Telegram
JNNCE Shivamogga Organizes Interaction on CET, COMED-K Seat Selection

jnnce : ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ: ನಗರದ ಜೆ.ಎನ್.ಎನ್. ಇಂಜಿನಿಯರಿಂಗ್​ ಕಾಲೇಜಿನಲ್ಲಿ ಇದೇ ಜೂ. 14ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ಎಂ.ಬಿ.ಎ.ಎಂ.ಸಿ.ಎ. ಸಭಾಂಗಣದಲ್ಲಿ ಸಿಐಟಿ, ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಅನುಕೂಲ ಪಡೆಯಬಹುದಾಗಿದೆ.

ಕಾರ್ಯಕ್ರಮದಲ್ಲಿ ಸಿಇಟಿ-ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯ ನೇರ ಪ್ರಾತ್ಯಕ್ಷಿಕೆ ನಡೆಯಲಿದೆ. ಅಲ್ಲದೆ ವಿವಿಧ ಇಂಜಿನಿಯರಿಂಗ್ ವಿಭಾಗಗಳ ಪರಿಚಯ, ಉದ್ಯೋಗಾವಕಾಶಗಳು, ವಿದ್ಯಾರ್ಥಿ ವೇತನಗಳು ಹಾಗೂ ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಶಿಕ್ಷಣ ಸಾಲದ ಸೌಲಭ್ಯಗಳ ಕುರಿತು ತಜ್ಞರು ಸಮಗ್ರ ಮಾಹಿತಿ ನೀಡಲಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯ ಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ, ಮಹಾವೀರ ಸರ್ಕಲ್ ಹಾಗೂ ಬಸ್ ನಿಲ್ದಾಣದಿಂದ jnnce ಕಾಲೇಜಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 96324 71667 ಸಂಖ್ಯೆಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Whatsapp / https://chat.whatsapp.com/JrsZ8He4nN600n0r3tJItz

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor