ಜೆ.ಎನ್.ಎನ್.ಇಂಜಿನಿಯರಿಂಗ್ ಕಾಲೇಜಿನಲ್ಲಿ 2 ದಿನ ಟೆಕ್​ ಝೋನ್! ಏನಿದೆ ವಿಶೇಷ ಗೊತ್ತಾ

ಹಂಚಿಕೊಳ್ಳಿ
WhatsApp Facebook X Telegram
JNNCE TechZone Nationals 2025: National Level Technical Fest in Shivamogga
JNNCE TechZone Nationals 2025: National Level Technical Fest in Shivamogga

ನವೆಂಬರ್, 09, 2025 ರ ಮಲೆನಾಡು ಟುಡೆ ಸುದ್ದಿ :  ಶಿವಮೊಗ್ಗ ನಗರದಲ್ಲಿರುವ ಜೆ.ಎನ್.ಎನ್.ಇಂಜಿನಿಯರಿಂಗ್ ಕಾಲೇಜಿನಲ್ಲಿ ನವೆಂಬರ್ 10 ಮತ್ತು 11 ರಂದು ಎರಡು ದಿನಗಳ ಕಾಲ ರಾಷ್ಟ್ರಮಟ್ಟದ ತಾಂತ್ರಿಕ ಉತ್ಸವವಾದ ಟೆಕ್‌ ಝೋನ್ ನ್ಯಾಷನಲ್ಸ್ 2025 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿವಮೊಗ್ಗ : 3 ತಿಂಗಳ ಗರ್ಭಿಣಿಯನ್ನ ಹೊರಹಾಕಿದ್ದಕ್ಕೆ, ಒಂದು ವರ್ಷ ಅಂದರ್! ಕೋರ್ಟ್​ ತೀರ್ಪು!

ನವೆಂಬರ್ 10 ರ ಸೋಮವಾರ ಬೆಳಿಗ್ಗೆ 09:30 ಕ್ಕೆ ಕಾಲೇಜಿನ ಎಂ.ಬಿ.ಎ – ಎಂ.ಸಿ.ಎ ಸಭಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಹೊಸೂರಿನ ಅಧಿಯಮಾನ್ ಇಂಜಿನಿಯರಿಂಗ್ ಕಾಲೇಜಿನ ನಿರ್ದೇಶಕರು ಹಾಗೂ ದಿ ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಅಧ್ಯಕ್ಷರಾದ ಡಾ.ಜಿ.ರಂಗನಾಥ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಹ ಕಾರ್ಯದರ್ಶಿ ಡಾ.ಪಿ. ನಾರಾಯಣ್ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರಾಂಶುಪಾಲರಾದ ಡಾ.ವೈ.ವಿಜಯ ಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಹಾಗೂ ಸಂಶೋಧಕರಾದ ಡಾ.ಈ.ಬಸವರಾಜ್ ಅವರು ಉಪಸ್ಥಿತರಿರಲಿದ್ದಾರೆ.

JNNCE TechZone Nationals 2025: National Level Technical Fest in Shivamogga
JNNCE TechZone Nationals 2025: National Level Technical Fest in Shivamogga

ಶಿವಮೊಗ್ಗ : 3 ತಿಂಗಳ ಗರ್ಭಿಣಿಯನ್ನ ಹೊರಹಾಕಿದ್ದಕ್ಕೆ, ಒಂದು ವರ್ಷ ಅಂದರ್! ಕೋರ್ಟ್​ ತೀರ್ಪು!

ಎರಡು ದಿನಗಳ ಕಾಲ ನಡೆಯುವ ಈ ಬೃಹತ್ ಕಾರ್ಯಕ್ರಮದಲ್ಲಿ ದೇಶದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳಿಂದ 1,300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಜೆ.ಎನ್.ಎನ್.ಸಿ.ಇ ಕಾಲೇಜಿನ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. 

ಈ ಉತ್ಸವದಲ್ಲಿ ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಪರಿಣಿತಿ, ಯೋಜನೆಗಳ ವಿನ್ಯಾಸ ಕೌಶಲ್ಯತೆ ಹಾಗೂ ನವೀನ ಚಿಂತನೆಗಳನ್ನು ಪ್ರದರ್ಶಿಸಲಿದ್ದಾರೆ. 

JNNCE TechZone Nationals 2025: National Level Technical Fest in Shivamogga
JNNCE TechZone Nationals 2025: National Level Technical Fest in Shivamogga

ಪಿಯು ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶ

ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸುವ ನಾವೀನ್ಯಪೂರ್ಣ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಲು ಹಾಗೂ ಆಧುನಿಕ ಆವಿಷ್ಕಾರಗಳ ಕುರಿತು ಅರಿವು ಪಡೆಯಲು, ಪಿಯು ವಿದ್ಯಾರ್ಥಿಗಳಿಗೆ ಭಾಗವಹಿಸಲು ಮತ್ತು ಉತ್ಸವವನ್ನು ವೀಕ್ಷಿಸಲು ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ.

ಶಿವಮೊಗ್ಗ : ಗಾಂಧಿ ಪಾರ್ಕ್​ನಲ್ಲಿನ ಮಕ್ಕಳ ರೈಲಿನ ಇಂಜಿನ್​ನಲ್ಲಿ ಸಮಸ್ಯೆ! ದಟ್ಟ ಹೊಗೆ!

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

JNNCE TechZone Nationals 2025: National Level Technical Fest in Shivamogga

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor