ಶಿವಮೊಗ್ಗ: ಜಿಲ್ಲೆಯ ನಿರುದ್ಯೋಗಿ ಯುವಜನತೆಗೆ ಖಾಸಗಿ ವಲಯದ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶವೊಂದು ಒದಗಿ ಬಂದಿದೆ. ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಇದೇ ಫೆಬ್ರವರಿ 21 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಶಿವಮೊಗ್ಗ ವಿಮಾನ ನಿಲ್ದಾಣ ನೈಟ್ ಲ್ಯಾಂಡಿಂಗ್ ವಿಚಾರವಾಗಿ ಹೊಸ ಅಪ್ಡೇಟ್: ನಂಜಯ್ಯನ ಮಠ ಹೇಳಿದ್ದೇನು
Job Fair 2026 ಈ ಮೇಳದಲ್ಲಿ ವಿವಿಧ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ನೇರ ಸಂದರ್ಶನ ಪ್ರಕ್ರಿಯೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ತಕ್ಷಣವೇ ಆಯ್ಕೆ ಮಾಡಿಕೊಳ್ಳಲಿವೆ .
ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಸೇರಿದಂತೆ ಯಾವುದೇ ಪದವಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. 18 ರಿಂದ 35 ವರ್ಷದ ವಯೋಮಿತಿಯೊಳಗಿನ ಯುವಕ-ಯುವತಿಯರು ತಮ್ಮ ಇತ್ತೀಚಿನ ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಈ ಮೇಳಕ್ಕೆ ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ
ನೇಮಕಾತಿ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಮಾಹಿತಿ ಬಯಸುವವರುಶಿವಮೊಗ್ಗದ ಸಾಗರ ರಸ್ತೆಯ ಪಂಪನಗರದ 2ನೇ ಕ್ರಾಸ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ಅಥವಾ ಇಲಾಖೆಯ ಮೊಬೈಲ್ ಸಂಖ್ಯೆ 9901914601 ಗೆ ಕರೆ ಮಾಡಿ ವಿವರಗಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯ ಮೂಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ.

Job Fair 2026 Direct Interview on Feb 21
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.