SHIVAMOGGA | ಒಂದೇ ದಿನ 5000ಕ್ಕೂ ಹೆಚ್ಚು ಉದ್ಯೋಗವಕಾಶದ ಉದ್ಯೋಗ ಮೇಳಕ್ಕೆ ಡೇಟ್​ ಫಿಕ್ಸ್!

Date fix for job fair of more than 5000 job openings! 5000ಕ್ಕೂ ಹೆಚ್ಚು ಉದ್ಯೋಗವಕಾಶದ ಉದ್ಯೋಗ ಮೇಳಕ್ಕೆ ಡೇಟ್​ ಫಿಕ್ಸ್!

SHIVAMOGGA | ಒಂದೇ ದಿನ  5000ಕ್ಕೂ  ಹೆಚ್ಚು ಉದ್ಯೋಗವಕಾಶದ ಉದ್ಯೋಗ ಮೇಳಕ್ಕೆ ಡೇಟ್​ ಫಿಕ್ಸ್!

KARNATAKA NEWS/ ONLINE / Malenadu today/ Oct 28, 2023 SHIVAMOGGA NEWS

Shivamogga  |  ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಯಾವಾಗ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಶಿವಮೊಗ್ಗ ನಗರದ ಸೈನ್ಸ್ ಮೈದಾನದಲ್ಲಿ ನವೆಂಬರ್ 8 ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದೆ. 

ರಾಜ್ಯದ 50 ಕ್ಕೂ ಹೆಚ್ಚಿನ  ಕಂಪನಿಗಳು ಈ ಉದ್ಯೋಗ ಮೇಳದಲ್ಲಿ  ಭಾಗವಹಿಸುತ್ತಿವೆ. 5000ಕ್ಕೂ ಹೆಚ್ಚಿನ ವಿದ್ಯಾವಂತ ಯುವಕರಿಗೆ ಉದ್ಯೋ ಗಾವಕಾಶ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ (District Collector Dr. R. Selvamani) ವಿವರಿಸಿದ್ದಾರೆ 

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವ ನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹ ಯೋಗದಲ್ಲಿ ಬೃಹತ್‌ ಉದ್ಯೋಗ ಮೇಳದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಎಸ್ಸೆಸ್ಸೆಲ್ಸಿ ಉತ್ತೀರ್ಣ ಮತ್ತು ಅನುತ್ತೀರ್ಣರಾ ದವರು, ಐಟಿಐ, ಡಿಪ್ಲೋಮಾ ಸೇರಿದಂತೆ ಎಲ್ಲ ರೀತಿಯ ಉನ್ನತ ಶಿಕ್ಷಣ, ತರಬೇತಿ ಪಡೆದ ಯುವಕರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ. ಆನ್‌ಲೈನ್‌ ಮೂಲಕ ಹೆಸರು ನೋಂ ದಾಯಿಸಬಹುದು. ಅಲ್ಲದೇ ಮೇಳ ನಡೆಯುವ ದಿನದಂದು ಆಕಾಂಕ್ಷಿಗಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊಂಡು ಭಾಗವಹಿಸಲು ಸಹ ಅವಕಾಶ ಕಲ್ಪಿಸಲಾಗಿದೆ ಎಂದರು. ಈ ಮೇಳದಿಂದಾಗಿ ಭವಿಷ್ಯದ ದಿನಗಳಲ್ಲಿ ಪ್ರತಿಭಾವಂತ ಪದವೀಧರ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. 

READ : 5 ಸಾವಿರ ಉದ್ಯೋಗವಕಾಶ ಕಲ್ಪಿಸುವ ವೇದಿಕೆಯಾಗಿದ್ದ ಉದ್ಯೋಗ ಮೇಳ ಮುಂದೂಡಿಕೆ! ಕಾರಣ? ಮತ್ತೆ ಯಾವಾಗ?

ಅನೇಕ ವಿಷಯಗಳಲ್ಲಿ ಅಲ್ಪಾವಧಿ ಮತ್ತು ದೀರ್ಘಾವಧಿ ತರಬೇತಿಗಳ ಮಾಹಿತಿಗಳು ದೊರೆಯಲಿವೆ.ಸ್ವಯಂ ಉದ್ಯೋಗಆರಂಭಿಸಲಿಚ್ಛಿಸು ವವರಿಗೆ ಸೂಕ್ತ ಮಾರ್ಗದರ್ಶನ ದೊರೆಯಲಿದೆ. ಎಂದು ಹೇಳಿದರು.

ಸಾಫ್ಟ್‌ವೇರ್, ಆಟೋಮೊಬೈಲ್, ಫೌಂಡ್ರಿ, ರಿಟೇಲ್ ಫಾರ್ಮಸಿ, ಹಣಕಾಸು ವಿಮೆ, ಗಾರ್ಮೆಂಟ್ಸ್ ಸೇರಿದಂತೆ 50 ಕ್ಕೂ ಹೆಚ್ಚಿನ ಸ್ಥಳೀಯ ಮತ್ತು ರಾಜ್ಯ ಮಟ್ಟದಬೃಹತ್‌ ಕಂಪನಿಗಳುಭಾಗವಹಿಸಲಿವೆ. 

ಈ ಮೇಳದಲ್ಲಿ ಅಪ್ರೆಂಟಿಸ್‌ಶಿಪ್ ತರಬೇತಿ ಪಡೆ ಯಲಿಚ್ಚಿಸುವವರು, ಕೌಶಲ್ಯ ತರಬೇತಿ ಪಡೆಯು ವವರು, ಆಯ್ಕೆಗೊಂಡ ನಂತರ ನಿಗದಿಪಡಿಸಿದ ವಿಷಯದಲ್ಲಿ ತರಬೇತಿ ಪಡೆಯಲಿಚ್ಚಿಸುವವರು, ಸ್ವಉದ್ಯೋಗ ಆರಂಭಿಸುವವರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು.

ಇದೇ ಸಂದರ್ಭದಲ್ಲಿ ಆಸಕ್ತರಿಗೆ ಬ್ಯಾಂಕುಗಳ ಸಾಲಸೌಲಭ್ಯ ಮುಂತಾದ ಮಾಹಿತಿಗಳನ್ನು ಒದಗಿ ಸಲು ಅವಕಾಶ ಕಲ್ಪಿಸಲಾಗಿದೆ. ಮೇಳದಲ್ಲಿ ಜಿಲ್ಲೆಯ ಹಾಗೂ ನೆರೆಯ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲಿದ್ದಾರೆ. ಭಾಗವಹಿಸುವ ಉದ್ಯೋಗಾಕಾಂಕ್ಷಿಗಳು, ಕೈಗಾರಿಕೋದ್ಯಮಿಗಳು ಮುಂಚಿತವಾಗಿ ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಸುಜಾತಾ, ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್‌.ಎಸ್‌. ಸುರೇಶ್‌, ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇ ಶಕ ಕೃಷ್ಣಪ್ಪ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಗಣೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಇನ್ನಷ್ಟು ಸುದ್ದಿಗಳು 

ಆಸ್ಪತ್ರೆ Appointment ಗಾಗಿ 10 ರೂಪಾಯಿ Pay ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್!

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್​ | ಸಿಕ್ತು ಮಂಗಳೂರು ಸ್ಪೇಷಲ್​ 93 ಬೀಡಿ | ಕಾರ್ಬನ್​​ ಮೊಬೈಲ್!

ಮೈಸೂರು ದಸರಾಕ್ಕೆ ಹೋಗಬೇಕಿದ್ದ ನೇತ್ರಾಳ ಪ್ರೆಗ್ನೆನ್ಸಿ ರಿಪೋರ್ಟ್​ ನೆಗೆಟಿವ್ ಇತ್ತು! ಹಾಗಾದರೆ ವಿಸ್ಮಯ ನಡೆಯಿತೆ? JP ಬರೆಯುತ್ತಾರೆ!


ಮಲೆನಾಡು ಟುಡೆ ಸೋಶಿಯಲ್​ ಮೀಡಿಯಾ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

Today whatsapp channel | ಮಲೆನಾಡು Today.com