ಶಿವಮೊಗ್ಗದಲ್ಲಿ ಈ ದಿನ ಬೃಹತ್ ನೇರ ಸಂದರ್ಶನ: ಪ್ರತಿಷ್ಠಿತ ಫಾರ್ಮಾ ಕಂಪನಿಯಲ್ಲಿ ಉದ್ಯೋಗಕ್ಕೆ ಸುವರ್ಣ ಅವಕಾಶ

ಹಂಚಿಕೊಳ್ಳಿ
WhatsApp Facebook X Telegram
Shivamogga Job ಸಾಂದರ್ಭಿಕ ಚಿತ್ರ
Shivamogga Jobಸಾಂದರ್ಭಿಕ ಚಿತ್ರ

Job Fair in Shimoga ಶಿವಮೊಗ್ಗ : ಶಿವಮೊಗ್ಗದ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಜಿಲ್ಲಾಉದ್ಯೋಗ ವಿನಿಮಯ ಕಚೇರಿಯು ಮೇ 16 ರಂದು ನೇರ ಸಂದರ್ಶನವನ್ನು ಏರ್ಪಡಿಸಿದೆ. ಈ ಸಂದರ್ಶನದ ಮೂಲಕ ಪ್ರತಿಷ್ಠಿತ ಖಾಸಗಿ ಕಂಪನಿಯಾದ ‘ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಪ್ರೈವೇಟ್ ಲಿಮಿಟೆಡ್’ ಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಬೆಂಗಳೂರು-ಶಿವಮೊಗ್ಗ ರೈಲು ಪ್ರಯಾಣಿಕರ ಗಮನಕ್ಕೆ: ಈ ದಿನ ಹಲವು ರೈಲುಗಳ ಸಂಚಾರ ವ್ಯತ್ಯಯ 

ಈ ಉದ್ಯೋಗ ಮೇಳದಲ್ಲಿ ಪಿಯುಸಿ (PUC), ಬಿ.ಎ (BA), ಬಿ.ಕಾಂ (B.Com), ಬಿ.ಎಸ್ಸಿ (B.Sc) ಮತ್ತು ಡಿಪ್ಲೊಮಾ ಪದವಿ ಪೂರೈಸಿದ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಗಳ ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಬಯೋಡೇಟಾ (Resume) ಹಾಗೂ ಆಧಾರ್ ಕಾರ್ಡ್‌ ಪ್ರತಿಗಳನ್ನು ಕಡ್ಡಾಯವಾಗಿ ತರಬೇಕು. ವಿಶೇಷವೆಂದರೆ, ಈ ನೇರ ಸಂದರ್ಶನಕ್ಕೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಸಂಪೂರ್ಣವಾಗಿ ಉಚಿತವಾಗಿ ಭಾಗವಹಿಸಬಹುದಾಗಿದೆ. 

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ. ಸಂದರ್ಶನವು ಮೇ 16ರಂದು ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ಪ್ರಾರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ: 9380663606, 9108235132 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Job Fair in Shimoga Walk-in Interview

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor