ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ನವೆಂಬರ್ 05ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ (ಉದ್ಯೋಗ ಮೇಳ)ವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳಾದ ನೆಕ್ಸ್ಚರ್ ಹಾಗೂ ಮುತ್ತೂಟ್ ಮನಿ ಪ್ರೈ.ಲಿ. ಸಂಸ್ಥೆಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ತಮ್ಮ ಸಂಸ್ಥೆಗೆ ಅಗತ್ಯವಿರುವ ಅರ್ಹ ಅಭ್ಯರ್ಥಿಗಳನ್ನು ಈ ಕಂಪನಿಗಳು ಸ್ಥಳದಲ್ಲಿಯೇ ಆಯ್ಕೆ ಮಾಡಿಕೊಳ್ಳಲಿವೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿಯುಸಿ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿರುವ 18 ರಿಂದ 35 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಈ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ. ಸಂದರ್ಶನವು ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಸ್ವವಿವರವುಳ್ಳ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ನ ಪ್ರತಿಯನ್ನು ತರತಕ್ಕದ್ದು. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ, ಸಂಪೂರ್ಣ ಉಚಿತ ಪ್ರವೇಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಖುದ್ದಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ 9380663606 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿವರ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
