ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ: ಪ್ರತಿಷ್ಠಿತ ಕಂಪನಿಗಳಿಂದ ನೇರ ಸಂದರ್ಶನ; ಮಿಸ್ ಮಾಡ್ಕೋಬೇಡಿ

Job Fair in Shivamogga ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ನಿರುದ್ಯೋಗಿ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಇದೇ ಏಪ್ರಿಲ್ 28 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಿದೆ. ನಗರದ ಸಾಗರ ರಸ್ತೆಯ ಪಂಪನಗರದಲ್ಲಿರುವ ಜಿಲ್ಲಾಉದ್ಯೋಗ ವಿನಿಮಯ ಕಚೇರಿಯ ಆವರಣದಲ್ಲೇ ಈ ಮೇಳ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

 ಈ ಉದ್ಯೋಗ ಮೇಳದಲ್ಲಿ ಆದಿಶಕ್ತಿ ಕಾರ್ಸ್ ಪ್ರೈ.ಲಿ., ನೆಕ್ಸ್ಚೆರ್ ಬಿಸಿನೆಸ್ ಸಲ್ಯೂಷನ್ಸ್, ಕರಾವಳಿ ಟೀಚರ್ಸ್, ಸ್ವಮಾನ್ ಫೈನಾನ್ಸ್ ಹಾಗೂ ಎಲ್ ಆಂಡ್ ಟಿ (L&T) ಫೈನಾನ್ಸ್‌ನಂತಹ ಪ್ರತಿಷ್ಠಿತ ಸಂಸ್ಥೆಗಳು ಪಾಲ್ಗೊಳ್ಳಲಿವೆ. ಈ ಕಂಪನಿಗಳು ತಮ್ಮಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಸ್ಥಳದಲ್ಲೇ ಆಯ್ಕೆ ಮಾಡಿಕೊಳ್ಳಲಿವೆ.

ಈ ಮೇಳದಲ್ಲಿ ಭಾಗವಹಿಸಲು ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪೂರೈಸಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೆಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತಪ್ಪದೇ ತರಬೇಕು ಮತ್ತು ಈ ಮೇಳಕ್ಕೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಪಂಪನಗರ, ಶಿವಮೊಗ್ಗ ಇಲ್ಲಿಗೆ ಭೇಟಿ ನೀಡಬಹುದು ಅಥವಾ ಮೊಬೈಲ್ ಸಂಖ್ಯೆ 9380663606 ಅಥವಾ 9108235132 ಗೆ ಕರೆ ಮಾಡಿ ವಿವರಗಳನ್ನು ಪಡೆಯಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Job Fair in Shivamogga on April 28 Walk-in Interview

Job Fair in Shivamogga  Karnataka Prison Department Shivamogga Health Dept Recruitment 2026
Job Fair in Shivamogga
shivamogga car decor sun control house
shivamogga car decor sun control house