5 ಸಾವಿರ ಉದ್ಯೋಗವಕಾಶ ಕಲ್ಪಿಸುವ ವೇದಿಕೆಯಾಗಿದ್ದ ಉದ್ಯೋಗ ಮೇಳ ಮುಂದೂಡಿಕೆ! ಕಾರಣ? ಮತ್ತೆ ಯಾವಾಗ?

The job fair scheduled to be held at Science Maidan in Shimoga has been postponedಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ನಡೆಯಬೇಕಿದ್ದ ಉದ್ಯೋಗ ಮೇಳವನ್ನು ಮುಂದೂಡಲಾಗಿದೆ

5 ಸಾವಿರ ಉದ್ಯೋಗವಕಾಶ ಕಲ್ಪಿಸುವ ವೇದಿಕೆಯಾಗಿದ್ದ ಉದ್ಯೋಗ ಮೇಳ ಮುಂದೂಡಿಕೆ! ಕಾರಣ? ಮತ್ತೆ ಯಾವಾಗ?

KARNATAKA NEWS/ ONLINE / Malenadu today/ Sep 14, 2023 SHIVAMOGGA NEWS  

ಶಿವಮೊಗ್ಗ ಸಿಟಿಯಲ್ಲಿ ಆಯೋಜಿಸಲಾಗ್ತಿರುವ ಬೃಹತ್ ಉದ್ಯೊಗ ಮೇಳ ಮುಂದಕ್ಕೆ ಹೋಗಿದೆ. ಬಹು ನಿರೀಕ್ಷಿತ ಉದ್ಯೋಗ ಮೇಳದಲ್ಲಿ 50 ಕ್ಕೂ ಹೆಚ್ಚು ಕಂಪನಿಗಳು ಹಾಗೂ ಐದು ಸಾವಿರಕ್ಕೂ ಹೆಚ್ಚು ಉದ್ಯೋಗವಕಾಶಗಳ ನಿರೀಕ್ಷೆಯನ್ನು ಹೊಂದಲಾಗಿತ್ತು. 



ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್​ ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿತ್ತು. 

50 ಕ್ಕೂ ಹೆಚ್ಚು ಕಂಪನಿ, 5 ಸಾವಿರಕ್ಕೂ ಅಧಿಕ ಮಂದಿಗೆ JOB! ಶಿವಮೊಗ್ಗ ಸೈನ್ಸ್​ ಮೈದಾನದಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ! ಈಗಲೇ ಓದಿ!

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಐಟಿಐ, ಡಿಪ್ಲೊಮೋ , ಬಿಕಾಂ, ಬಿಎ, ಬಿಸಿಎ, ಬಿಇ, ಬಿಸಿಎ, ಬಿಇ, ಬಿಟೆಕ್  ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು  ಪಾಲ್ಗೊಳ್ಳಬಹುದು ಎಂದು ಸೂಚಿಸಲಾಗಿತ್ತು. 

ಇದೀಗ  ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸೆ. 15ರಂದು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಉದ್ಯೋಗಮೇಳವನ್ನು ಕಾರಣಾಂತರದಿಂದ ಮುಂದೂಡಲಾಗಿದೆ. ಈ ಸಂಬಂಧ, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಇನ್ನಷ್ಟು ಸುದ್ದಿಗಳು