SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 22, 2024 job news
ಕರ್ನಾಟಕ ಲೋಕಸೇವಾ ಆಯೋಗವೂ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರನ್ವಯ ಗ್ರೂಪ್-‘ಬಿ’ ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಗಳು
ಕೃಷಿ ಅಧಿಕಾರಿ 86
ಸಹಾಯಕ ಕೃಷಿ ಅಧಿಕಾರಿ 586
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 07-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-11-2024
ವಿಶೇಷ ಸೂಚನೆ
ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆ ನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು
ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ / ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು.
ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರ/ಇತರೆ ಪ್ರಮಾಣ ಪತ್ರಗಳನ್ನು ತಮ್ಮ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಅಧಿಸೂಚನೆಯ ಅನುಬಂಧದಲ್ಲಿ ಸೂಚಿಸಿರುವ ನಮೂನೆಗಳಲ್ಲಿಯೇ ಕಡ್ಡಾಯವಾಗಿ ಪಡೆದಿಟ್ಟುಕೊಂಡು ಸದರಿ ದಾಖಲೆಗಳನ್ನು ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡತಕ್ಕದ್ದು.
(ದಾಖಲೆಗಳು ಸ್ಪಷ್ಟವಾಗಿರುಬೇಕು) ತಪ್ಪಿದ್ದಲ್ಲಿ ಅವರ ಮೀಸಲಾತಿ/ಅಭ್ಯರ್ಥಿತ್ವವನ್ನು ತಿರಸ್ಕರಿಸಲಾಗುವುದು
ಅರ್ಜಿ ಸಲ್ಲಿಸುವ ಸಮಯದಲ್ಲಿ ಮೀಸಲಾತಿಯನ್ನು ಕೋರದೆ ತದನಂತರದಲ್ಲಿ ಮೀಸಲಾತಿಯನ್ನು ಪರಿಗಣಿಸುವಂತೆ ಕೋರಿ ಸಲ್ಲಿಸುವ ಮನವಿ/ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಿ, ಭಾವಚಿತ್ರ/ಸಹಿ /ವಯೋಮಿತಿ/ ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಶುಲ್ಕವನ್ನು ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/UPI ಮೂಲಕ ಸಂದಾಯ ಮಾಡಬಹುದಾಗಿರುತ್ತದೆ.
ಶುಲ್ಕವನ್ನು ಪಾವತಿಸದ ಹಾಗೂ ದಾಖಲೆಗಳನ್ನು / ಭಾವಚಿತ್ರ / ಸಹಿಯನ್ನು ಅಪ್ಲೋಡ್ ಮಾಡದೇ ಇರುವ/ಆಸ್ಪಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತೊಂದರೆಗಳು ಎದುರಾದಲ್ಲಿ ಈ ಕೆಳಕಂಡ ಹೆಲ್ಪ್ ಲೈನ್ ನಂಬರ್ ಅನ್ನು ಸಂಪರ್ಕಿಸಲು ಸೂಚಿಸಿದೆ. HELP LINE NO:080-30574957/30574901
ಅಭ್ಯರ್ಥಿಗಳು ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಯಾವುದೇ ಕಾರಣಕ್ಕೂ ಹೆಸರು, ಜನ್ಮದಿನಾಂಕ, ವಿಳಾಸ ಬದಲಾವಣೆ, ಮೀಸಲಾತಿ, ವಿದ್ಯಾರ್ಹತೆ ಮುಂತಾದ ವಿವರಗಳನ್ನು ತಿದ್ದುಪಡಿ ಮಾಡುವಂತೆ ಸಲ್ಲಿಸುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.
ಆದರೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಈಗಾಗಲೇ ಸಲ್ಲಿಸಿರುವ ಅರ್ಜಿಯನ್ನು ಸ್ವಯಂ Delete ಮಾಡಿ ಹೊಸದಾಗಿ ಮತ್ತೊಂದು ಅರ್ಜಿಯನ್ನು ಸಲ್ಲಿಸಬಹುದಾಗಿದೆ. Delete ಮಾಡಿದ ಅರ್ಜಿಗೆ ಕಟ್ಟಿರುವ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ ಅಥವಾ ಇತರೆ ಯಾವುದೇ ಹುದ್ದೆಗಳಿಗೆ ಸರಿದೂಗಿಸಲಾಗುವುದಿಲ್ಲ.
ಅಭ್ಯರ್ಥಿಗಳು KPSC ವೆಬ್ಸೈಟ್ ಮೂಲಕ ಮಾತ್ರ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು, ಇದರ ಹೊರತಾಗಿ ಯಾವುದೇ ಇತರ ಮೂಲಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. 7. ಹೊಸದಾಗಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು, ಅರ್ಜಿದಾರರು https://kpsconline.karnataka.gov.in ಗೆ ಭೇಟಿ ನೀಡಬೇಕು ಮತ್ತು ತಮ್ಮನ್ನು ನೋಂದಾಯಿಸಿಕೊಳ್ಳಲು “ಹೊಸ ಅರ್ಜಿದಾರರ ನೋಂದಣಿ” (NEW REGISTRATION) ಲಿಂಕ್ ಅನ್ನು ಕ್ಲಿಕ್ ಮಾಡಬೇಕು.