ಶಿವಮೊಗ್ಗ ವಿಮಾನ ನಿಲ್ದಾಣ ದಲ್ಲಿ ಉದ್ಯೋಗವಕಾಶ! ಆಗಸ್ಟ್ 11 ಕ್ಕೆ ವಿಮಾನ ಹಾರಾಟ! ಸಚಿವ ಎಂ. ಬಿ.ಪಾಟೀಲ್​ ಮಹತ್ವದ ಹೇಳಿಕೆ

Job opportunities at Shimoga airport! Flights to fly on August 11! Minister M. B Patil's important statement

ಶಿವಮೊಗ್ಗ ವಿಮಾನ ನಿಲ್ದಾಣ ದಲ್ಲಿ ಉದ್ಯೋಗವಕಾಶ! ಆಗಸ್ಟ್ 11 ಕ್ಕೆ ವಿಮಾನ ಹಾರಾಟ! ಸಚಿವ ಎಂ. ಬಿ.ಪಾಟೀಲ್​ ಮಹತ್ವದ ಹೇಳಿಕೆ

KARNATAKA NEWS/ ONLINE / Malenadu today/ Jul 13, 2023 SHIVAMOGGA NEWS

ಶಿವಮೊಗ್ಗ ವಿಮಾನ ನಿಲ್ದಾಣ ಜುಲೈ 20ರ ವೇಳೆಗೆ ಎಲ್ಲಾರೀತಿಯಲ್ಲಿ ಸಜ್ಜುಗೊಳಿಸಲಾಗುವುದು ಹಾಗೂ, ಆ.11ರಿಂದ ವಿಮಾನ ಹಾರಾಟ ಆರಂಭವಾಗು ಸಾಧ್ಯತೆ ಇದೆ ಅಂತಾ  ಸಚಿವ ಎಂ ಬಿ ಪಾಟೀಲ್ ತಿಳಿಸಿದ್ಧಾರೆ. 

ಬೆಂಗಳೂರಿನಲ್ಲಿ ಮಾತನಾಡಿರುವ  ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್​  ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಕಾಮಗಾರಿ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುತ್ತಾ,  ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಂಬುಲೆನ್ಸ್ ಮತ್ತು ಇತರೆ ಅಗತ್ಯ ವಾಹನಗಳನ್ನು ನಿಯೋಜಿಸುವ ಕೆಲಸ ಆಗಬೇಕಾಗಿದೆ ಎಂದರು

ಕಾಫಿ ಕೆಫೆ ಆರಂಭಿಸುವ ಸಂಬಂಧದ ಕೆಲಸವೂ ಆಗಬೇಕಿದೆ. ಜೊತೆಗೆ, ಕೆಲವು ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿ ನೇಮಕ ನಡೆಯಬೇಕಿದೆ. ಇವೆಲ್ಲವನ್ನೂ ಜುಲೈ 20ರ ಹೊತ್ತಿಗೆ ಪೂರೈಸಿ ವಿಮಾನ ನಿಲ್ದಾಣವನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗುವುದು ಎಂದು ವಿವರಿಸಿದರು. 

ಕೇಂದ್ರ ನಾಗರಿಕ ವಿಮಾನ ನಿರ್ದೇಶನಾಲಯವು (Central Directorate General of Civil Aviation) ಇಲ್ಲಿನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್ಐಐಡಿಸಿ) ವಹಿಸಿದೆ. ಇದರೊಂದಿಗೆ ಶಿವಮೊಗ್ಗ ನಿಲ್ದಾಣವು ರಾಜ್ಯ ಸರ್ಕಾರದ ಸಂಸ್ಥೆಯ ವತಿಯಿಂದ ನಡೆಯಲಿರುವ ಕರ್ನಾಟಕದ ಮೊದಲನೇ ವಿಮಾನ ನಿಲ್ದಾಣವಾಗಲಿದೆ ಎಂದು ಪಾಟೀಲ್​ ಹೇಳಿದರು.

ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ 20 ವಿಮಾನಗಳು ಬಂದಿಳಿದಿವೆ. ಇದರಿಂದಾಗಿ 12 ಲಕ್ಷ ರೂ. ಆದಾಯ ಬಂದಿದೆ ಎಂದು ಇದೇ ವೇಳೆ ತಿಳಿಸಿದರು 

ಆ.11ರಂದು ನಿಲ್ದಾಣ ಕಾರ್ಯಾರಂಭಗೊಳಲಿದ್ದು, ಅಂದು ಮೊದಲ ವಿಮಾನ‌ ಹಾರಾಟ ನಡೆಸಲಿದೆ. ಈ ಐತಿಹಾಸಿಕ ಸನ್ನಿವೇಶಕ್ಕೆ ಸಾಕ್ಷಿಯಾಗಲು ಜಿಲ್ಲೆಯ ರಾಜಕೀಯ ಮುಖಂಡರು ಮತ್ತು ಜನಪ್ರತಿನಿಧಿಗಳೂ ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಯೋಜನೆಯಂತೆ ನಡೆದರೆ ಆ.11ರಂದು ಬೆಂಗಳೂರಿನಿಂದ ಹೊರಡುವ ವಿಮಾನವು ಶಿವಮೊಗ್ಗ ನಿಲ್ದಾಣದಲ್ಲಿ ಇಳಿಯಲಿದೆ ಎಂದರು.