Shivamogga | Jan 29, 2024 | job opportunities in shimoga, job fair in Shivamogga , ಜ.30 ರಂದು ಉದ್ಯೋಗ ಮೇಳ
ಶಿವಮೊಗ್ಗದಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜನವರಿ.30 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‍ಎಸ್‍ಎಲ್‍ಸಿ/ಪಿಯುಸಿ/ ಐಟಿಐ/ ಡಿಪ್ಲೊಮಾ/ಬಿಇ ಮತ್ತು ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ದೂ.ಸಂ.: 08182-255293/ 9380663606 /8151093947/ 9482023412 ಇವರನ್ನು ಖುದ್ದಾಗಿ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಂದನ ವಾಹಿನಿಯಲ್ಲಿ ‘ಸಮಾನತೆಯ ಕಡೆಗೆ’ ಚಲನಚಿತ್ರ ಪ್ರದರ್ಶನ
ಅಸ್ಪøಶ್ಯತೆ ನಿವಾರಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ‘ಸಮಾನತೆಯ ಕಡೆಗೆ’ ಎಂಬ ಕನ್ನಡ ಚಲನಚಿತ್ರವನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಾಯೋಜನೆ ಮಾಡಿ ಚಂದನ ವಾಹಿನಿಯಲ್ಲಿ ದಿ: 26-01-2024 ರ ಗಣರಾಜ್ಯೊತ್ಸವ ದಿನದಂದು ಮಧ್ಯಾಹ್ನ 2.30 ರಿಂದ 4.30 ರ ಅವಧಿಯಲ್ಲಿ ಪ್ರಸಾರ ಮಾಡಲಾಗುವುದು. ಸಾರ್ವಜನಿಕರು ಈ ಚಲನಚಿತ್ರವನ್ನು ವೀಕ್ಷಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಕೋರಿದ್ದಾರೆ.
