ಉದ್ಯೋಗಾವಕಾಶ: ಎಸ್​ಎಸ್​ಎಲ್​ಸಿ, ಪಿಯುಸಿ, ಡಿಪ್ಲೊಮೋ, ಪದವಿಧರರಿಗೆ ಇಲ್ಲಿದೆ ಕೆಲಸ ಪಡೆಯುವ ಅವಕಾಶ| ಶಿವಮೊಗ್ಗದಲ್ಲಿ ನಡೆಯಲಿದೆ ಉದ್ಯೋಗ ಮೇಳ

Job Opportunities: SSLC, PUC, Diploma, Degree holders have the opportunity to get a job here| Job Fair to be held in Shimoga

ಉದ್ಯೋಗಾವಕಾಶ: ಎಸ್​ಎಸ್​ಎಲ್​ಸಿ, ಪಿಯುಸಿ, ಡಿಪ್ಲೊಮೋ, ಪದವಿಧರರಿಗೆ ಇಲ್ಲಿದೆ ಕೆಲಸ ಪಡೆಯುವ ಅವಕಾಶ| ಶಿವಮೊಗ್ಗದಲ್ಲಿ ನಡೆಯಲಿದೆ ಉದ್ಯೋಗ ಮೇಳ

job-opportunities : ಶಿವಮೊಗ್ಗ, ಜನವರಿ 21 (ಕರ್ನಾಟಕ ವಾರ್ತೆ): ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಜ.24 ರಂದು ಬೆಳಿಗ್ಗೆ 10.00 ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದೆ.

 ಉದ್ಯೋಗ ಮೇಳದಲ್ಲಿ ಪ್ರತಿಷ್ಟಿತ ಖಾಸಗಿ ಕಂಪೆನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲ್ಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ(ರೆಸ್ಯೂಮ್) ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು.  ಪ್ರವೇಶ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ದೂ.ಸಂ: 08182-255293, 9380663606 / 9482023412 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವಧಿ ವಿಸ್ತರಣೆ

ಶಿವಮೊಗ್ಗ, ಜನವರಿ 21 (ಕರ್ನಾಟಕ ವಾರ್ತೆ): ಜಿಲ್ಲಾ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು 2022-23ನೇ ಸಾಲಿಗೆ ಅರ್ಹ ಉಪ್ಪಾರ ಸಮುದಾಯದ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವು ಕೊನೆಯ ದಿನಾಂಕವನ್ನು ಜ. 17 ರಿಂದ ಜ.31ರವರೆಗೆ ವಿಸ್ತರಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

BREAKING NEWS : 200 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ/ ಮೆಗ್ಗಾನ್​ ಆಸ್ಪತ್ರೆಗೆ ICMR ತಂಡ ಭೇಟಿ

ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ, ಜನವರಿ 21 (ಕರ್ನಾಟಕ ವಾರ್ತೆ): ಜಿಲ್ಲಾ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು 2022-23ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಉಪ್ಪಾರ ಮತ್ತು ಇದರ ಉಪಜಾತಿ ಸಮಾಜದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಘಟಕ ವೆಚ್ಚ 2.50 ಲಕ್ಷ ರೂ.ಗಳಲ್ಲಿ 2.00 ಲಕ್ಷ ರೂ.ಗಳ ಸಹಾಯಧನ ಮತ್ತು ಹೆಚ್ಚುವರಿಯಾಗಿ ಅಗತ್ಯವಿದ್ದಲ್ಲಿ ರೂ. 50,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರಲ್ಲಿ 3 ವರ್ಷಗಳ ಮರುಪಾವತಿ ಅವಧಿಯೊಂದಿಗೆ ನೀಡಲು ಆಗತ್ಯವಿರುವ ರೈತರುಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್‍ಲೈನ್ ಅರ್ಜಿ ಆಹ್ವಾನಿಸಿದ್ದು, ದಿ: 02/03/2023 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ಆಸಕ್ತ ಆರ್ಹ ರೈತರು ನಿಗಮದ ವೆಬ್‍ಸೈಟ್ http:// upparadevelopment.karnataka.gov.in ಅಥವಾ ಸಹಾಯವಾಣಿ 7026288888  ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ  ದೂ.ಸಂ.: 08182-229634 ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com