Jog falls open to public timings : ಗುಡ್​ ನ್ಯೂಸ್​, ಜೋಗ ಪಾಲ್ಸ್ ಪ್ರವೇಶಕ್ಕಿದ್ದ ನಿರ್ಬಂಧ ತೆರವು! ಓಪನ್ ಯಾವಾಗ ಗೊತ್ತಾ?

Malenadu Today

Jog falls open to public timings : ಪ್ರವಾಸಿಗರಿಗೆ ಜೋಗ ಪ್ರಾಧಿಕಾರ ಗುಡ್ ನ್ಯೂಸ್ ಕೊಟ್ಟಿದೆ. ಕಳೆದ ಕೆಲ ತಿಂಗಳಿನಿಂದ ಜೋಗ ಜಲಪಾತ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನಿರಾಕರಿಸಿ, ಸ್ಥಳದಲ್ಲಿ ನಿರ್ಬಂಧ ಹೇರಲಾಗಿತ್ತು. 

ಇದೀಗ ಸಾರ್ವಜನಿಕರಿಗೆ ಇರುವ ಪ್ರವೇಶ ನಿರ್ಬಂಧವನ್ನು ತೆಗೆದು ಹಾಕಲಾಗಿದೆ. ಸಾರ್ವಜನಿಕರು ಮಳೆಗಾಲ ಆರಂಭದ ಹೊತ್ತಿಗೆ ಜೋಗ ಜಲಪಾತವನ್ನು ವೀಕ್ಷಿಸಬಹುದಾಗಿದೆ. 

- Advertisement -
Jog falls open to public timings
Jog falls open to public timings

Jog falls open to public timings : ಜೋಗ ಪ್ರವೇಶಕ್ಕೆ ದಿನ ನಿಗದಿ

ಯಾವಾಗನಿಂದ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ ಇದೆ ಎಂಬುದನ್ನು ಗಮನಿಸುವುದಕ್ಕೂ, ಜಲಪಾತ ವೀಕ್ಷಣೆಗೆ ನಿರ್ಬಂಧ ಹೇರಿದ್ದ ವಿಚಾರದ ಬಗ್ಗೆ ತಿಳಿಸುತ್ತೇವೆ. 

ಜೋಗದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಈ ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಜಲಪಾತ ವೀಕ್ಷಣೆಗೆ ಪ್ರವೇಶ ನಿರ್ಬಂಧ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಬರುವ ಏಪ್ರಿಲ್​ 30ರ ವರೆಗೂ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ಹೇರಲಾಗಿತ್ತು. 

ಇದೀಗ ಈ ಆದೇಶವನ್ನು ಜಿಲ್ಲಾಧಿಕಾರಿ ಗುರುದತ್ ಹೆಗೆಡೆ ಹಿಂಪಡೆದಿದ್ದಾರೆ, ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. 

ಬರುವ  ಮೇ 01 ರಿಂದ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತದ ವೀಕ್ಷಣೆಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರಿದ ಮುಖ್ಯ ಕಾರ್ಯ ನಿರ್ವಹಣಾದಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Share This Article