ನವೆಂಬರ್, 03, 2025 ರ ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗ ಜಿಲ್ಲೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ (Principal District and Sessions Judge) ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ ನಾಯಕ್ ರವರನ್ನು ಬೆಳಗಾವಿ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ವರ್ಗಾವಣೆಗೊಳಿಸಾಗಿದೆ. ಈ ಸಂಬಂಧ ಉಚ್ಚ ನ್ಯಾಯಾಲಯವು ದಿನಾಂಕ 30.10.2025 ರಂದು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ಆದೇಶಿಸಿದೆ.

ನ್ಯಾ. ಮಂಜುನಾಥ್ ನಾಯಕ್ (Judge Manjunath Naik) ಅವರು 2023ರ ಜೂನ್ ತಿಂಗಳಿನಲ್ಲಿ ಬೆಂಗಳೂರಿನ ಉಚ್ಚ ನ್ಯಾಯಾಲಯದ ನೇಮಕಾತಿ ನಿಬಂಧಕರಾಗಿ ಸೇವೆ ಸಲ್ಲಿಸಿ ಶಿವಮೊಗ್ಗಕ್ಕೆ ವರ್ಗಾವಣೆಗೊಂಡು ಇಲ್ಲಿ ಅಧಿಕಾರ ವಹಿಸಿಕೊಂಡಿದ್ದರು.ನ್ಯಾಯಾಧೀಶರು ದಿನಾಂಕ 03.11.2025 ರಂದು ಶಿವಮೊಗ್ಗದ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರ ಹುದ್ದೆಯಿಂದ ಮುಕ್ತಗೊಂಡು, ದಿನಾಂಕ 05.11.2025 ರಂದು ಬೆಳಗಾವಿಗೆ ತೆರಳಿ ಅಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಪದಗ್ರಹಣ ಮಾಡಲಿದ್ದಾರೆ.
ಸೇವಾ ಅವಧಿಯ ಪ್ರಮುಖ ಸಾಧನೆಗಳು/Judge Manjunath Naik
ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ದಾಖಲೆ: ನ್ಯಾ. ಮಂಜುನಾಥ್ ನಾಯಕ್ ರವರ ಮಾರ್ಗದರ್ಶನದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಒಟ್ಟು 10 ರಾಷ್ಟ್ರೀಯ ಲೋಕ ಅದಾಲತ್‌ಗಳನ್ನು ಆಯೋಜಿಸಲಾಗಿತ್ತು. ಇದರ ಫಲವಾಗಿ, ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣಾ ಹಂತದಲ್ಲಿದ್ದ ಒಟ್ಟು 1,21,499 ಪ್ರಕರಣಗಳು ರಾಜಿ ಸಂಧಾನದ ಮೂಲಕ ಅಂತಿಮವಾಗಿ ವಿಲೇವಾರಿ ಆಗಿದ್ದವು.

ಉದ್ಯೋಗವಕಾಶ, ಧನಲಾಭ, ವ್ಯಾಪಾರ ವೃದ್ಧಿ! ಶುಭ ಸೋಮವಾರ! ದಿನವಿಶೇಷ, ದಿನಭವಿಷ್ಯ!
ಪ್ರಕರಣಗಳ ವಿಲೇವಾರಿಯಲ್ಲಿ ದಾಖಲೆ: ಗೌರವಾನ್ವಿತ ಉಚ್ಚ ನ್ಯಾಯಾಲಯವು ನಿಗದಿಪಡಿಸಿದ ನಿಯಮಕ್ಕಿಂತಲೂ ಮೂರು ಪಟ್ಟು ಹೆಚ್ಚು ಪ್ರಕರಣಗಳಲ್ಲಿ ತೀರ್ಪುಗಳನ್ನು ನೀಡಿ, ಅವುಗಳನ್ನು ವಿಲೇವಾರಿಗೊಳಿಸುವ ಮೂಲಕ ಪ್ರಕರಣಗಳ ಇತ್ಯರ್ಥದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ.
ಸಿಬ್ಬಂದಿ ನೇಮಕಾತಿ ಮತ್ತು ಮುಂಬಡ್ತಿ: ತಮ್ಮ ಅವಧಿಯಲ್ಲಿ ವಿವಿಧ ಹುದ್ದೆಗಳಿಗೆ 50ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನೇಮಕಾತಿ ಮಾಡಿದ್ದು, ಸೇವೆಯಲ್ಲಿದ್ದ 54 ಸಿಬ್ಬಂದಿಗಳ ಸೇವೆಯನ್ನು ಪರಿಶೀಲಿಸಿ ಅವರಿಗೆ ಮುಂಬಡ್ತಿಯನ್ನು ನೀಡಿದ್ದಾರೆ. ಅಲ್ಲದೆ, 69 ಸಿಬ್ಬಂದಿಗಳ ಪ್ರೊಬೇಷನ್ ಅವಧಿಯನ್ನು ತೃಪ್ತಿಕರವಾಗಿ ಪೂರ್ಣಗೊಳಿಸಿದ ಕಾರಣ ಅವರನ್ನು ಸಾರ್ವಜನಿಕ ಸೇವೆಯಲ್ಲಿ ಖಾಯಂಗೊಳಿಸಿ ಆದೇಶಿಸಿದ್ದಾರೆ.
ಭದ್ರಾವತಿ ಕೋರ್ಟ್ : IPS ಜಿತೇಂದ್ರ ಕುಮಾರ್ ದಯಾಮ ಚಾರ್ಜ್ಶೀಟ್ ಸಲ್ಲಿಸಿದ್ದ ಕೇಸ್ನಲ್ಲಿ ನಾಲ್ವರಿಗೆ ಶಿಕ್ಷೆ
ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಸಕ್ರಿಯತೆ: ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ, ಅವರು ವಿವಿಧ ಕಾನೂನು ಅರಿವು ಕಾರ್ಯಕ್ರಮಗಳು ಹಾಗೂ ಅಭಿಯಾನಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಾಮಾನ್ಯ ಜನರಿಗೆ ಕಾನೂನು ಅರಿವನ್ನು ನೀಡುವಲ್ಲಿ ಮತ್ತು ಅರ್ಹರಿಗೆ ಕಾನೂನು ನೆರವು ಒದಗಿಸುವಲ್ಲಿ ಅತ್ಯುನ್ನತ ಸೇವೆಯನ್ನು ಸಲ್ಲಿಸಿದ್ದಾರೆ.
ಗಣ್ಯರ ಶುಭಾಶಯ/Judge Manjunath Naik
ನ್ಯಾ. ಮಂಜುನಾಥ್ ನಾಯಕ್ ರವರ ಸೇವೆ ಇನ್ನು ಹೆಚ್ಚಿನ ಸಾರ್ವಜನಿಕರಿಗೆ ಲಭಿಸಲಿ ಮತ್ತು ಬೆಳಗಾವಿಗೆ ವರ್ಗಾವಣೆಗೊಂಡು ತೆರಳುತ್ತಿರುವ ಸ್ಥಳದಲ್ಲಿ ಅವರಿಗೆ ಮತ್ತಷ್ಟು ಉತ್ತಮ ಸೇವಾ ಅವಕಾಶಗಳು ಸಿಗಲಿ ಎಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ನ್ಯಾಯವಾದಿಗಳು, ನ್ಯಾಯಾಂಗ ಇಲಾಖೆಯ ಸಿಬ್ಬಂದಿ ವರ್ಗದವರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನೊಳಗೊಂಡಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.
ಶಿವಮೊಗ್ಗದಲ್ಲಿ ನಡೆಯುತ್ತಿದ್ದಿದ್ದು ಸಾಗರದಲ್ಲಿಯು ಶುರುವಾಯ್ತು! ದಾಖಲಾಯ್ತು ಕೇಸ್
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
