ಶಿವಮೊಗ್ಗ : ಉದ್ವೇಗದಲ್ಲಿ ತಪ್ಪು ಮಾತನಾಡಿದ್ದು ನಿಜ,ಕಾಗೋಡು ತಿಮ್ಮಪ್ಪ, ಮಧು ಬಂಗಾರಪ್ಪ ಬಳಿ ಕ್ಷಮೆಯಾಚಿಸಿದ ಕಲ್ಲೂರು ಮೇಘರಾಜ್!

ಹಂಚಿಕೊಳ್ಳಿ
WhatsApp Facebook X Telegram
Kallur Megharaj Apologizes to Kagodu Thimmappa
Kallur Megharaj Apologizes to Kagodu Thimmappa

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ಪ್ರಮುಖರಾದ ಕಲ್ಲೂರು ಮೇಘರಾಜ್​ ಇದೀಗ ಕ್ಷಮೆ ಕೇಳಿ ಪತ್ರ ಬರೆದಿದ್ದಾರೆ.

ಘಟನೆಯ ಹಿನ್ನೆಲೆ ನೋಡುವುದಾದರೆ, ನವಂಬರ್​ 03 ರಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ನಡೆದಿದ್ದ ಸುದ್ದಿಗೋಷ್ಠಿಯಲ್ಲಿ ಕಲ್ಲೂರು ಮೇಘರಾಜ್​ ಮಾತನಾಡುವಾಗ ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯ ಅಗತ್ಯವಿತ್ತಾ? ಎಂಬ ಮಾತನ್ನು ಹೇಳಿದ್ದರು. ಅಷ್ಟೇ ಅಲ್ಲದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಆತನೊಬ್ಬ ಕರಡಿ ಕುಣಿತದ ಮಂತ್ರಿ, ಆತನೇ ಕಾಗೋಡು ತಿಮ್ಮಪ್ಪ ಅವರಿಗೆ ಪ್ರಶಸ್ತಿ ಕೊಡಿಸಿದ್ದು ಎನ್ನುವ ರೀತಿ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಮಾತುಗಳು ಕಾಗೋಡು ತಿಮ್ಮಪ್ಪ ಹಾಗೂ ಮಧು ಬಂಗಾರಪ್ಪ ಅವರ ಅಭಿಮಾನಿಗಳನ್ನು ಕೆರಳಿಸಿತ್ತು. ಅಷ್ಟೇ ಅಲ್ಲದೆ ಕಲ್ಲೂರು ಮೇಘರಾಜ್​ರವರು ಬಹಿರಂಗವಾಗಿ ಕ್ಷಮೆ ಕೇಳದಿದ್ದರೆ ಹೋರಾಟ ನಡೆಸುವುದಾಗಿ ಮತ್ತು ಅವರ ಕಾರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸುವುದಾಗಿ ಅಭಿಮಾನಿಗಳು ಎಚ್ಚರಿಕೆಯನ್ನು ನೀಡಿದ್ದರು.

ವಿವಾದ ದೊಡ್ಡದಾದ ಬೆನ್ನಲ್ಲೇ ಇದೀಗ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಕಲ್ಲೂರು ಮೇಘರಾಜ್​​, “ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಹಾಲಿನ ದರ ಏರಿಕೆಯ ವಿಚಾರವಾಗಿ ಮಾತನಾಡುವಾಗ, ಹಿರಿಯರಾದ ಕಾಗೋಡು ತಿಮ್ಮಪ್ಪನವರ ಬಗ್ಗೆ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪನವರ ಬಗ್ಗೆ ಉದ್ವೇಗದಲ್ಲಿ ನಾನು ತಪ್ಪು ಮಾತನಾಡಿರುವುದು ನಿಜ. ಆದ್ದರಿಂದ ನಾನು ಈ ಇಬ್ಬರಲ್ಲಿ ಕ್ಷಮೆ ಕೋರುತ್ತೇನೆ” ಎಂದು ಹೇಳಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor