ಶಿವಮೊಗ್ಗ: ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋ*ಕ್ಸೋ ಸಂಕಷ್ಟ; 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಶಿವಮೊಗ್ಗ: ಸಿದ್ದಾಪುರದ ವಸಂತ್ ನಾಯ್ಕ್ ಕೊಲೆ ಪ್ರಕರಣದ ಮೂರನೇ ಆರೋಪಿಯಾಗಿ ಜೈಲು ಸೇರಿರುವ ಜ್ಯೋತಿಷಿ ಕಮಲಾಕರ್ ಭಟ್‌ಗೆ ಈಗ ಮತ್ತೊಂದು ಪೋಕ್ಸೋ ಪ್ರಕರಣದ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಪೋಕ್ಸೋ ನ್ಯಾಯಾಲಯವು ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. 

ಶಿವಮೊಗ್ಗ : ಗ್ಯಾಸ್ ಟ್ರಬಲ್ ನಡುವೆ ಸಿಲಿಂಡರ್ ಕಳ್ಳತನ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಠಾಣೆಯೊಂದರಲ್ಲಿ ಈ ಮೊದಲು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಆದರೆ, ಘಟನೆ ನಡೆದ ಸ್ಥಳದ ವ್ಯಾಪ್ತಿಯ ಆಧಾರದ ಮೇಲೆ ಪ್ರಕರಣವನ್ನು ಶಿವಮೊಗ್ಗದ  ಪೊಲೀಸ್​​ ಠಾಣೆಯೊಂದಕ್ಕೆ ವರ್ಗಾಯಿಸಲಾಗಿತ್ತು. ಇಂದು ಕಾರವಾರ ಜೈಲಿನಿಂದ ಕರೆತಂದ ಪೊಲೀಸರು, ಆತನನ್ನು ನಗರದ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಕೋರ್ಟ್ ಆದೇಶದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೊಳಪಡಿಸಿದ್ದಾರೆ. ಮೆಡಿಕಲ್ ಟೆಸ್ಟ್ ಮುಗಿದ ನಂತರ ಪೊಲೀಸರು ಕಮಲಾಕರ್ ಭಟ್‌ನನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಲಿದ್ದು, ಘಟನಾ ಸ್ಥಳಕ್ಕೆ ಕರೆದೊಯ್ದು ಮಹಜರು ಪ್ರಕ್ರಿಯೆ ನಡೆಸಲಿದ್ದಾರೆ.

Kamalakar Bhat Sent to Police Custody

Kamalakar Bhat Sent to Police Custody
Kamalakar Bhat Sent to Police Custody
shivamogga car decor sun control house
shivamogga car decor sun control house