STATE NEWS

ಆ್ಯಂಬುಲೆನ್ಸ್​​ಗಳಿಗೆ ಹೊಸ ಗೈಡ್ಲೈನ್ಸ್​ : ತಡವಾದರೆ 5 ಸಾವಿರ ದಂಡ ?

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Karnataka 108 Ambulance ಶಿವಮೊಗ್ಗ : ಇನ್ಮುಂದೆ ತುರ್ತು ಕರೆ ಬಂದ ಕೇವಲ 15 ನಿಮಿಷಗಳಲ್ಲಿ ಆ್ಯಂಬುಲೆನ್ಸ್ ನಿಗದಿತ ಜಾಗಕ್ಕೆ ಕಡ್ಡಾಯವಾಗಿ ತಲುಪಬೇಕು ಎಂಬ ಹೊಸ ರೂಲ್ಸ್​​​ನ್ನುಆರೋಗ್ಯ ಸಚಿವ ಯುಟಿ ಖಾದರ್​ ಜಾರಿಗೆ ತಂದಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಸಕಾಲದಲ್ಲಿ ಸ್ಪಂದಿಸುವ ನಿಟ್ಟಿನಲ್ಲಿ ಆ್ಯಂಬುಲೆನ್ಸ್ ಚಾಲಕರಿಗೆ ಈ ಹೊಸ ಕಾಲಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ತುರ್ತು ಕರೆ ಬಂದ 15 ನಿಮಿಷಗಳ ಒಳಗೆ 108 ಆ್ಯಂಬುಲೆನ್ಸ್ ಸ್ಥಳಕ್ಕೆ ಆಗಮಿಸದಿದ್ದರೆ, ಸಂಬಂಧಪಟ್ಟ ಚಾಲಕರಿಗೆ 5,000 ವರೆಗೆ ದಂಡ ವಿಧಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರದ ರಾಷ್ಟ್ರೀಯ ಆ್ಯಂಬುಲೆನ್ಸ್ ಸೇವೆಗಳ ಗೈಡ್‌ಲೈನ್ಸ್ ಪ್ರಕಾರ 20 ನಿಮಿಷಗಳ ಕಾಲಾವಕಾಶ ಇದೆ. ಆದರೆ, ರಾಜ್ಯದಲ್ಲಿ ಇದನ್ನು ಮತ್ತಷ್ಟು ಕಡಿತಗೊಳಿಸಿ ಜನಸ್ನೇಹಿಯಾಗಿಸಲಾಗುತ್ತಿದೆ.

ಅಪಘಾತ ಅಥವಾ ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಮೊದಲ ಒಂದು ಗಂಟೆಯ ಅವಧಿ ಅತಿ ಮುಖ್ಯವಾಗಿದ್ದು, ಇದನ್ನು ವೈದ್ಯಕೀಯ ಲೋಕದಲ್ಲಿ ಗೋಲ್ಡನ್ ಅವರ್ ಎನ್ನಲಾಗುತ್ತದೆ. ಈ ಅವಧಿಯಲ್ಲೇ ಸೂಕ್ತ ಚಿಕಿತ್ಸೆ ಸಿಕ್ಕರೆ ಶೇ. 90 ರಷ್ಟು ರೋಗಿಗಳ ಪ್ರಾಣ ಉಳಿಸಬಹುದು. ಇದೇ ಕಾರಣಕ್ಕೆ ರಾಜ್ಯದಲ್ಲಿ 15 ನಿಮಿಷದ ನಿಯಮವನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ.

ಪ್ರಸ್ತುತ ರಾಜ್ಯಾದ್ಯಂತ ಸುಮಾರು 700 ರಿಂದ 800 ಆ್ಯಂಬುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಈ ಇಡೀ ನೆಟ್‌ವರ್ಕ್ ಅನ್ನು ಇನ್ನಷ್ಟು ವ್ಯವಸ್ಥಿತವಾಗಿ ರೂಪಿಸಲು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಹೊಸ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗುತ್ತದೆ. ಈ ಇಡೀ ಪ್ರಕ್ರಿಯೆ ಪೂರ್ಣಗೊಂಡು ಅಧಿಕೃತವಾಗಿ ಜಾರಿಗೆ ಬರಲು ಕನಿಷ್ಠ ಮೂರು ತಿಂಗಳ ಸಮಯಾವಕಾಶ ಬೇಕಾಗಬಹುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Karnataka 108 Ambulance Service 15-Minute Deadline

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.