ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನ ಕಾಂಗ್ರೆಸ್ ಸೂಚಿಸಿದೆ. ಈ ಪೈಕಿ ಶಿವಮೊಗ್ಗದಲ್ಲಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಿದೆ. ಸಾಗರ, ಭದ್ರಾವತಿ ಹಾಗೂ ಸೊರಬ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಫೈನಲ್ ಮಾಡಲಾಗಿದ್ದು, ಲಿಸ್ಟ್ನಲ್ಲಿ ಹೆಸರು ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಮತ್ತು ತೀರ್ಥಹಳ್ಳಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿಲ್ಲ.
ಯುಗಾದಿಯ ದಿನದಂದು ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾಗಬೇಕಾಗಿತ್ತು. ಆದರೆ ರಾಹುಲ್ ಗಾಂಧಿಯವರಿಗೆ ಕೋರ್ಟ್ ಶಿಕ್ಷೆ ವಿಧಿಸಿದ್ದು, ಹಾಗೂ ಸಂಸತ್ನಿಂದ ಅನರ್ಹಗೊಳಿಸಿದ ಹಿನ್ನಲೆಯಲ್ಲಿ ಪಟ್ಟಿ ಬಿಡುಗಡೆ ಇನ್ನಷ್ಟು ವಿಳಂಬವಾಗಲಿದೆ ಎನ್ನಲಾಗಿತ್ತು. ಇದರ ನಡುವೆ ಕೆಪಿಸಿಸಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು ಯಾರ್ಯಾರು
ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಭದ್ರಾವತಿಯಲ್ಲಿ ನಿರೀಕ್ಷೆಯಂತೆಯೇ ಸಂಗಮೇಶ್ವರ್ ಬಿಕೆ ಟಿಕೆಟ್ ಫೈನಲ್ ಆಗಿದೆ. ಇನ್ನು ಸೊರಬದಲ್ಲಿ ಮಧು ಬಂಗಾರಪ್ಪ ಹಾಗೂ ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣರಿಗೆ ಟಿಕೆಟ್ ಫೈನಲ್ ಆಗಿದೆ. ಭದ್ರಾವತಿ ಮತ್ತು ಸೊರಬದಲ್ಲಿ ಮಧು ಬಂಗಾರಪ್ಪ ಹಾಗೂ ಬಿಕೆ ಸಂಗಮೇಶ್ವರ್ರಿಗೆ ವಿರೋಧವಿಲ್ಲವಾದರೂ ಸಾಗರ ಕ್ಷೇತ್ರದ ಟಿಕೆಟ್ ಘೋಷಣೆ ಅಸಮಾಧಾನ ಎಬ್ಬಿಸುವ ಸಾಧ್ಯತೆ ಇದೆ. ಏಕೆಂದರೆ, ಟಿಕೆಟ್ ವಿಚಾರವಾಗಿ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ನೇತೃತ್ವದ ತಂಡವೊಂದು ಕೆಪಿಸಿಸಿ ನಾಯಕರನ್ನ ಇತ್ತೀಚೆಗೆ ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸಿತ್ತು. ಇನ್ನೂ ತೀರ್ಥಹಳ್ಳಿ ಕ್ಷೇತ್ರದ ಟಿಕೆಟ್ ಘೋಷಣೆಯಾಗಿಲ್ಲ. ಇದು ಸಹ ಕುತೂಹಲ ಮೂಡಿಸಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಟಿಕೆಟ್ ವಿಚಾರವೂ ಅಚ್ಚರಿ ಮೂಡಿಸಿದೆ
ಉಳಿದಂತೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಮೊದಲ ಪಟ್ಟಿ ಇಲ್ಲಿದೆ ನೋಡಿ
Read / ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್ಗೆ ₹500 ಸಬ್ಸಿಡಿ! ಏಕೆಗೊತ್ತಾ?
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
MALENADUTODAY.COM/ SHIVAMOGGA / KARNATAKA WEB NEWS/
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023, shivamogga,shivamogga accident,road accident,accident,road accident in shivamogga,shivamogga incident,accident in shimoga road,shivamogga news,bike accident,shimoga accident,royal enfield accident,shivamogga sp congress candidates list,karnataka congress candidates list,congress first list of candidates,congress releases list of 124 candidates,congress,congress 124 candidates,congress high command,congress candidates for 2023 election,first list of congress candidates,congress candidates,congress candidate list,congress first list,congress ticket list,congress candidates list 2023,karnataka congress,congress ticket aspirantsರಾಜ್ಯ ವಿಧಾನಸಭಾ ಚುನಾವಣೆ, (Karnataka Election 2023) ಕಾಂಗ್ರೆಸ್ (Congress) (Candidate List) (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar).
