SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 16, 2024
ರೈಲು ಡಿಕ್ಕಿ ಮೂವರ ಸಾವು- train accident
ರೈಲು ಹಳಿಯನ್ನು ದಾಟುತ್ತಿದ್ದ ಸಂದರ್ಭ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಮೃತಪಟ್ಟ ಘಟನೆ ಮಂಗಳೂರಿನ ಗಡಿಭಾಗವಾದ ಕಾಸರಗೋಡು ಜಿಲ್ಲೆಯ ಕಾಞಂಗಾಂಡ್‌ನಲ್ಲಿ ಸಂಭವಿಸಿದೆ. ಆಲೀಸ್ ಥೋಮಸ್ (63), ಚಿನ್ನಮ್ಮ (68) ಮತ್ತು ಏಂಜೆಲ್ (30) ಮೃತರು ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದ ಇವರು ಹಳಿ ದಾಟಿ ಮುಂದಕ್ಕೆ ಹೋಗಲು ಮುಂದಾದ ಸಂದರ್ಭದಲ್ಲಿ ರೈಲು ಡಿಕ್ಕಿಯಾಗಿದೆ.
ನಾಲ್ವರು ಸಾವು
ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ನಿನ್ನೆ ದಿನ ಸಂಜೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟು ಆರು ಜನ ಗಾಯಗೊಂಡಿದ್ದಾರೆ. ಕಂಟೇನರ್ ಲಾರಿ ಬ್ರೇಕ್ ಫೇಲ್ ಆಗಿ ಮೂರು ಕಾರು, ಎರಡು ಲಾರಿ, ಒಂದು ಬೈಕ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಚಲಾಯಿಸುತ್ತಿದ್ದ ಚಿಕ್ಕೋಡಿ ತಾಲೂಕಿನ ಓರ್ವ ವ್ಯಕ್ತಿ ಹಾಗೂ ವ್ಯಾಗನಾರ್ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸಾವಿಗೀಡಾಗಿದ್ದಾರೆ.
ಮೂವರು ನೀರುಪಾಲು
ಗಣಪತಿ ವಿಸರ್ಜನೆ ವೇಳೆ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ತುರುವೇಕೆರೆ ತಾಲ್ಲೂಕಿನ ರಂಗನಹಟ್ಟಿಯಲ್ಲಿ ನಡೆದಿದೆ. ನಿನ್ನೆ ಭಾನುವಾರ ಗಣೇಶನ ವಿಸರ್ಜನೆ ಮಾಡಲು ಶರತ್, ದಯಾನಂದ್ ನೀರಿಗೆ ಇಳಿದಿದ್ದರು. ಈ ವೇಳೆ ನೀರಿನಲ್ಲಿ ಕೆಸರು ಜಾಸ್ತಿ ಇದ್ದು, ಅವರ ಕಾಲುಗಳು ಹೂತಿವೆ. ಪರಿಣಾಮ ನೆರವಿಗಾಗಿ ಕೂಗಿದ್ದಾರೆ. ಈ ವೇಳೆ ಶರತ್ ರ ತಂದೆ ರೇವಣ್ಣ ನೀರಿಗೆ ಇಳಿದಿದ್ದಾರೆ. ಆದರೆ ಮೂವರಿಗೂ ಮೇಲಕ್ಕೆ ಬರಲಾಗದೆ ಸಾವನ್ನಪ್ಪಿದ್ದಾರೆ.
ಪಾಲೇಸ್ತಿನ್ ಧ್ವಜ ಹಿಡಿದು ಓಡಾಟ
ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಯುವಕರು ಪ್ಯಾಲಿಸ್ತೀನ್ ಧ್ವಜ ಹಿಡಿದು ದ್ವಿಚಕ್ರ ವಾಹನದ ಮೇಲೆ ಓಡಾಡಿರುವ ವಿಡಿಯೋ ವೈರಲ್ ಆಗಿದೆ. ಪ್ಯಾಲಿಸ್ತೀನ್ ಧ್ವಜ ಹಿಡಿದು ಓಡಾಡಿದ ಮುಸ್ಲಿಂ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಚಿಕ್ಕಮಗಳೂರು ನಗರ ಠಾಣೆ ಮುಂಭಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕ್ಲಬ್‌ನಲ್ಲಿ ಪಾರ್ಟಿ ಪೊಲೀಸ್ ಅಧಿಕಾರಿ ಸಸ್ಪೆಂಡ್
ಕ್ಲಬ್‌ನಲ್ಲಿ ಪಾರ್ಟಿ ಮಾಡಿ ಅನುಚಿತ ವರ್ತನೆ ತೋರಿದ ಆರೋಪದಲ್ಲಿ ಹಾಸನ ಜಿಲ್ಲೆಯ ಬೇಲೂರು ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸುಬ್ರಹ್ಮಣ್ಯ, ತಾಲ್ಲೂಕಿನ ಹಳೆಬೀಡು ವೃತ್ತದ ಸರ್ಕಲ್ ಇನ್ಸಪೆಕ್ಟರ್ ಜಯರಾಂ ಹಾಗೂ ಬೇಲೂರು ಠಾಣೆಯ ಪಿಎಸ್ಐ ಪ್ರವೀಣ್ ಸೇರಿ ಮೂವರನ್ನ ಅಮಾನತು ಮಾಡಿ ಹಾಸನ ಎಸ್ಪಿ ಮೊಹಮದ್ ಸುಜೀತಾ ಆದೇಶ ಹೊರಡಿಸಿದ್ದಾರೆ. ಕ್ಲಬ್‌ನಲ್ಲಿ ಬಿಲ್ ವಿಚಾರಕ್ಕೆ ಇವರು ಕಿರಿಕ್ ಮಾಡಿದ್ದರು.
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ