ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 29, 2025: ಖಾಸಗಿ ಬಸ್ನಲ್ಲಿ ಪ್ರಯಾಣಿಸ್ತಿದ್ದ ವ್ಯಕ್ತಿಯೊಬ್ಬನ ಬಳಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಕ್ಯಾಶ್ ಪತ್ತೆಯಾಗಿದೆ. ಈ ಹಣಕ್ಕೆ ದಾಖಲೆ ನೀಡದ ಹಿನ್ನೆಲೆಯಲ್ಲಿ ಹಣವನ್ನು ಸೀಜ್ ಮಾಡಲಾಗಿದೆ.
ಶಿವಮೊಗ್ಗದಲ್ಲಿ ನಡೆಯುತ್ತಿದ್ದಿದ್ದು ಸಾಗರದಲ್ಲಿಯು ಶುರುವಾಯ್ತು! ದಾಖಲಾಯ್ತು ಕೇಸ್
ಕಾರವಾರ-ಗೋವಾ ಗಡಿ ಭಾಗದ ಮಾಜಾಳಿ ಚೆಕ್ ಪೋಸ್ಟ್‌ನಲ್ಲಿ ಸೋಮವಾರ ದಿನ ತಡರಾತ್ರಿ ಖಾಸಗಿ ಬಸ್ ಪ್ರಯಾಣಿಕರಿಂದ ದಾಖಲೆ ಇಲ್ಲದ 1 ಕೋಟಿ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಸ್ನಲ್ಲಿ ಪ್ರಯಾಣಿಸ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿ ರೂ. 500 ಮುಖಬೆಲೆಯ ನೋಟುಗಳ ಬಂಡಲ್‌ಗಳು ದೊರೆತಿವೆ.
ಈ ಹಣವನ್ನು ಗೋವಾದಿಂದ ಬೆಂಗಳೂರಿಗೆ ಸಾಗಾಟ ಮಾಡಲಾಗುತ್ತಿತ್ತು ಎಂಬುದು ಗೊತ್ತಾಗಿದೆ.ವಿಚಾರದ ಸಂಬಂಧ ಕಲ್ವೇಶ್ ಕುಮಾರ್ ಹಾಗೂ ಬೊಂಬ್ರು ರಾವ್ ಎಂಬ ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆಯಲಾಗಿದೆ. ಹಣಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ನೀಡಲು ವಿಫಲರಾದ ಅವರಿಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ನಾನೂ ಸಹ ಆಗ್ತೀನಿ! ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ!
ಸದಾಶಿವಗಡದ ಚಿತ್ತಕುಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಣದ ಮೂಲ, ಮಾಲೀಕತ್ವ ಮತ್ತು ಸಾಗಾಟದ ಉದ್ದೇಶದ ಬಗ್ಗೆ ತನಿಖೆ ಮುಂದುವರೆದಿದೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

