ಪೊಲೀಸ್ ಇಲಾಖೆಯಲ್ಲಿ 8176 ಹುದ್ದೆಗಳ ನೇಮಕಾತಿ! ಹೊರಬಿತ್ತು ವರ್ಗೀಕರಣದ ಸೂಚನೆ

Police jobs / ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಇತ್ತೀಚೆಗೆ ಸರ್ಕಾರಿ ಉದ್ಯೋಗಕ್ಕಾಗಿ ನಡೆದ ಪ್ರತಿಭಟನೆ ಬೆನ್ನಲ್ಲೆ ರಾಜ್ಯ ಸರ್ಕಾರ ಯುವಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 56,432 ನೇರ ನೇಮಕಾತಿ ಹುದ್ದೆಗಳನ್ನು ತುಂಬುವ ಪ್ರಕ್ರಿಯೆಯನ್ನು ಮುಂದಿನ 30 ದಿನಗಳಲ್ಲಿ ಪ್ರಾರಂಭಿಸುವಂತೆ ಎಲ್ಲಾ ಇಲಾಖೆಗಳಿಗೆ ಹಾಗೂ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕೃತ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ತನ್ನ ಇಲಾಖೆಯ ವ್ಯಾಪ್ತಿಯಲ್ಲಿ ನೇಮಕಾತಿ ಪ್ರಕ್ರಿಯೆಗಾಗಿ ವರ್ಗಿಕರಣ ಕೇಳಿ ಸೂಚನೆ ಹೊರಡಿಸಿದೆ.

 Karnataka Govt order to fill 8176 Police jobs ,Police Department has begun the classification process for 8,176 posts, including Civil and Armed Police Constables
Karnataka Govt order to fill 8176 Police jobs ,Police Department has begun the classification process for 8,176 posts, including Civil and Armed Police Constables

ಶಿವಮೊಗ್ಗ ಮಾರಿಕಾಂಬ ಜಾತ್ರೆ, ತಾಳಗುಪ್ಪ ಬೆಂಗಳೂರು ವಿಶೇಷ ಟ್ರೈನ್​

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂಥೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು 2026 ರ ಮಾರ್ಚ್ 4 ರಂದು ಅಂದರೆ ಇವತ್ತು ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿನ 8176 ಹುದ್ದೆಗಳ ಭರ್ತಿಗೆ ರೋಸ್ಟರ್ ವರ್ಗೀಕರಣ ಮಾಡಿ ಕಳುಹಿಸುವಂತೆ ಎಲ್ಲಾ ಘಟಕಗಳ ಮುಖ್ಯಸ್ಥರಿಗೆ ಸೂಚಿಸಿದ್ದಾರೆ. 

ಒಟ್ಟು 8176 ಹುದ್ದೆಗಳ ಪೈಕಿ 20 ಡಿಟೆಕ್ಟಿವ್ ಸಬ್ ಇನ್ಸ್‌ಪೆಕ್ಟರ್ (ಡಿಎಸ್‌ಐ), 1650 ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ (ಎಪಿಸಿ), 4110 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್, 2032 ಕೆಎಸ್‌ಆರ್‌ಪಿ ಕಾನ್‌ಸ್ಟೇಬಲ್ ಹಾಗೂ 364 ಕೆಎಸ್‌ಐಎಸ್‌ಎಫ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕೇತರ ವಿಭಾಗಗಳಡಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ಪ್ರಕಟಣೆಯಲ್ಲಿರುವ ಮುಖ್ಯಾಂಶ

ಉಚ್ಚ ನ್ಯಾಯಾಲಯವು 2025 ರ ನವೆಂಬರ್ 27 ರಂದು ನೀಡಿರುವ ಮಧ್ಯಂತರ ಆದೇಶದ ಅನ್ವಯ, ಈ ಹಿಂದೆ ಜಾರಿಯಲ್ಲಿದ್ದ ಶೇಕಡಾ 50ರ ಮಿತಿಯ ಮೀಸಲಾತಿ ಆದೇಶದಂತೆಯೇ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು 2026 ರ ಫೆಬ್ರವರಿ 27 ರಂದು ಸರ್ಕಾರ ನಿರ್ದೇಶನ ನೀಡಿದೆ. 

 Karnataka Govt order to fill 8176 Police jobs ,Police Department has begun the classification process for 8,176 posts, including Civil and Armed Police Constables
Karnataka Govt order to fill 8176 Police jobs ,Police Department has begun the classification process for 8,176 posts, including Civil and Armed Police Constables

ಹೆಂಡತಿಯನ್ನೆ ಕೊಂದ ಗಂಡನಿಗೆ ಶಿವಮೊಗ್ಗ ಕೋರ್ಟ್​ ನೀಡಿತು ಕಠಿಣ ಶಿಕ್ಷೆ! ಡಿಶ್​ ಕೇಬಲ್​ ವಯರ್​ ಮರ್ಡರ್​ ಕಥೆಗೆ ತಾರ್ಕಿಕ ಅಂತ್ಯ!

ನೇಮಕಾತಿ ವಿಭಾಗಕ್ಕೆ ಹುದ್ದೆಗಳ ಹಂಚಿಕೆಯಾಗಿದ್ದು, ಘಟಕಗಳ ಮುಖ್ಯಸ್ಥರು ತಮ್ಮ ವ್ಯಾಪ್ತಿಯಲ್ಲಿ ಸರ್ಕಾರದ ಹೊಸ ಮಾರ್ಗಸೂಚಿಯಂತೆ ಶೇಕಡಾ 6ರಷ್ಟು ಹುದ್ದೆಗಳನ್ನು ಕಾಯ್ದಿರಿಸಿ ಉಳಿದ ಹುದ್ದೆಗಳಿಗೆ ಮೀಸಲಾತಿ ವರ್ಗೀಕರಣ ಮಾಡಿ ಕಳುಹಿಸುವಂತೆ ಸೂಚಿಸಲಾಗಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣವೇ ಪೊಲೀಸ್ ಇಲಾಖೆಯ ಬೃಹತ್ ನೇಮಕಾತಿ ಅಧಿಸೂಚನೆ ಹೊರಬೀಳಲಿದೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹೊರಡಿಸಿರುವ ಸೂಚನೆ ಕಾಪಿ ಇಲ್ಲಿದೆ ಗಮನಿಸಿ

ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹೊರಡಿಸಿರುವ ಸೂಚನೆ ಕಾಪಿ ಇಲ್ಲಿದೆ ಗಮನಿಸಿ
ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹೊರಡಿಸಿರುವ ಸೂಚನೆ ಕಾಪಿ
ಸುದ್ದಿ ಟೈಟಲ್: Karnataka Govt order to fill 8176 Police jobs ,Police Department has begun the classification process for 8,176 posts, including Civil and Armed Police Constables