ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 28, 2025 : ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನ ಸಿದ್ಲೀಪುರ ಗ್ರಾಮದಲ್ಲಿ ಕಟ್ಟಡದ ಗೋಡೆ ಕುಸಿದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಬಗ್ಗೆ ನಿನ್ನೆದಿನ ವರದಿಯಾಗಿತ್ತು. ಈ ಸಂಬಂದ ಇದೀಗ ಕಾರ್ಮಿಕ ಇಲಾಖೆ ಸ್ಪಷ್ಟನೆ ನೀಡಿದೆ. Karnataka Labour Department
ಕಾರ್ಮಿ ಇಲಾಖೆ ತನ್ನ ಸ್ಪಷ್ಟನೆಯಲ್ಲಿ ಶಿವಮೊಗ್ಗ ತಾಲೂಕಿನ ಸಿದ್ಲೀಪುರದಲ್ಲಿ ಕಾರ್ಮಿಕ ಇಲಾಖೆ ಕಟ್ಟಡದ ಸಮೀಪ ಕಾರ್ಮಿಕರೊಬ್ಬರು ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದರು. ಕಾರ್ಮಿಕ ಇಲಾಖೆ ವತಿಯಿಂದ ಇತ್ತೀಚೆಗೆ ನಿರ್ಮಾಣವಾಗಿರುವ ಸಂಚಾರಿ ವಸತಿ ಸಮುಚ್ಚಯದ ಕಟ್ಟಡ ಕುಸಿದು ಒರ್ವ ವ್ಯಕ್ತಿ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿರುವ ಸುದ್ದಿಯು ಅಪೂರ್ಣವಾದ ಅಂಶಗಳನ್ನು ಒಳಗೊಂಡಿದೆ ಎಂದು ಇಲಾಖೆ ತಿಳಿಸಿದೆ.
ಕುಸಿದಿರುವ ಕಟ್ಟಡ ಕಾರ್ಮಿಕ ಇಲಾಖೆ ನಿರ್ಮಿಸಿರುವ ವಸತಿ ಸಮುಚ್ಚಯವಲ್ಲ. ಬದಲಾಗಿ ವಸತಿ ಸಮುಚ್ಚಯ ನಿರ್ಮಾಣದ ಗುತ್ತಿಗೆದಾರರು ನಿರ್ಮಿಸಿಕೊಂಡಿದ್ದ ಒಂದು ತಾತ್ಕಾಲಿಕ ಕಟ್ಟಡವಾಗಿದೆ. ಅಲ್ಲದೆ ಈ ಕಟ್ಟಡದಲ್ಲಿ ಯಾರೂ ವಾಸವಿರಲಿಲ್ಲ ಎಂದು ವಿವರಿಸಿದೆ.

ಮೃತ ಹಾಗೂ ಗಾಯಗೊಂಡಿರುವ ವ್ಯಕ್ತಿಗಳು ಈ ಕಟ್ಟಡದ ಸಿಮೆಂಟ್ ಇಟ್ಟಿಗೆಗಳನ್ನು ಗುತ್ತಿಗೆದಾರರಿಗೆ ಯಾವುದೇ ಮಾಹಿತಿ ನೀಡದೆ ತೆರವು ಮಾಡಲು ಮುಂದಾದಾಗ ಈ ದುರ್ಘಟನೆ ಸಂಭವಿಸಿದೆ. ಇಟ್ಟಿಗೆಗಳನ್ನು ತೆರವು ಮಾಡುವಾಗ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಸಹ ತೆಗೆದುಕೊಂಡಿಲ್ಲ ಎಂದು ಇಲಾಖೆ ತಿಳಿಸಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

