ಫುಟ್‌ಪಾತ್ ಮೇಲೆ ವಾಹನ ಓಡಿಸಿದರೆ ₹5,000 ದಂಡ? ಬರುತ್ತಿದೆ ಹೊಸ ಕಾನೂನು!

ಹಂಚಿಕೊಳ್ಳಿ
WhatsApp Facebook X Telegram
Shivamogga Traffic Police Clear Footpath and Road Encroachments in Garden Area
Shivamogga Traffic Police Clear Footpath and Road Encroachments in Garden Area

ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಸಂಚಾರ ನಿಯಮಗಳ ಉಲ್ಲಂಘನೆಗೆ ವಿಧಿಸಲಾಗುತ್ತಿರುವ ದಂಡದ ಮೊತ್ತವನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈಗಿರುವ ದಂಡವನ್ನು 3ರಿಂದ 4 ಪಟ್ಟು ಹೆಚ್ಚಿಸುವ ಕುರಿತು ಚಿಂತನೆ ನಡೆದಿದೆ. ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಪಾದಚಾರಿ ಪಥದಲ್ಲಿ ವಾಹನ ನಿಲುಗಡೆ ಮಾಡುವುದು, ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವುದು ಹಾಗೂ ಒನ್‌ವೇ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವ ಪ್ರಕರಣಗಳಿಗೆ ಈಗಿರುವ ₹1,000 ದಂಡವನ್ನು ₹5,000ಕ್ಕೆ ಹೆಚ್ಚಿಸುವ ಬಗ್ಗೆ ಪ್ರಸ್ತಾವನೆ ಚರ್ಚೆಗೆ ಬಂದಿದೆ.

ಭಾರತ್ ಜೋಡೋ ಯಾತ್ರೆ 2.0

ಈ ಕುರಿತಾಗಿ , ಬುಧವಾರ ವಿಕಾಸಸೌಧದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಾರಿಗೆ ಸಚಿವ ಬೈರತಿ ಸುರೇಶ್ ಉಪಸ್ಥಿತಿಯಲ್ಲಿ ನಡೆದ ಜಂಟಿ ವಿಮರ್ಶಾ ಸಭೆಯಲ್ಲಿ ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣ, ರಸ್ತೆ ಸುರಕ್ಷತೆ ಹೆಚ್ಚಿಸುವುದು ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕುವ ಕುರಿತು ವಿಸ್ತೃತ ಚರ್ಚೆ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಪಾದಚಾರಿ ಪಥದಲ್ಲಿ ವಾಹನಗಳ ನಿಲುಗಡೆ ಮತ್ತು ಚಾಲನೆ ಹಾಗೂ ಒನ್‌ವೇ ನಿಯಮ ಉಲ್ಲಂಘನೆಗೆ ಈಗಿರುವ ₹1,000 ದಂಡವನ್ನು ₹5,000ಕ್ಕೆ ಏರಿಸುವ ಸಲಹೆ ವ್ಯಕ್ತವಾಗಿದೆ.

ಈ ಕುರಿತು ಕಾನೂನು ಇಲಾಖೆಯೊಂದಿಗೆ ಚರ್ಚಿಸಿ, ಸಚಿವ ಸಂಪುಟ ಸಭೆಯಲ್ಲಿಯೂ ವಿಚಾರ ಮಂಡಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಇದರೊಂದಿಗೆ ಸಂಚಾರ ನಿಯಮ ಉಲ್ಲಂಘಿಸುವ ಚಾಲಕರನ್ನು ಕಪ್ಪುಪಟ್ಟಿಗೆ ಸೇರಿಸುವುದು, ಚಾಲಕರಿಗೆ ಕಡ್ಡಾಯ ತರಬೇತಿ ಶಿಕ್ಷೆ ನೀಡುವಂತಹ ಕ್ರಮಗಳ ಬಗ್ಗೆಯೂ ಚಿಂತನೆ ನಡೆದಿದೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor