ರಾಜ್ಯದ ಜನತೆಗೆ ಮತ್ತೆ ‘ಕರೆಂಟ್ ಶಾಕ್’: ವಿದ್ಯುತ್ ದರ ಏರಿಕೆ ಸಾಧ್ಯತೆ, ಯಾವಾಗಿಂದ ಗೊತ್ತಾ..? 

ಹಂಚಿಕೊಳ್ಳಿ
WhatsApp Facebook X Telegram
Karnataka Power Tariff Hike Likely from April 1
Karnataka Power Tariff Hike Likely from April 1

ಬೆಂಗಳೂರು |ರಾಜ್ಯದ ಜನತೆಗೆ ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಗಳು ಹೆಚ್ಚಿದೆ. ಕರ್ನಾಟಕದ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ಸುಮಾರು 4,900 ಕೋಟಿ ರೂಪಾಯಿಗಳ ಭಾರಿ ಆರ್ಥಿಕ ನಷ್ಟವನ್ನು ಎದುರಿಸುತ್ತಿದ್ದು, ಈ ಕೊರತೆಯನ್ನು ಸರಿದೂಗಿಸಲು ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಪ್ರಸ್ತಾವನೆ ಸಲ್ಲಿಸಿವೆ. ಈ ಪೈಕಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಒಂದೇ 2,800 ಕೋಟಿ ರೂಪಾಯಿಗೂ ಅಧಿಕ ನಷ್ಟ ಅನುಭವಿಸಿದೆ ಎಂದು ವರದಿಯಾಗಿದೆ.

ಈ ಪ್ರಸ್ತಾವನೆಯನ್ನು ಪರಿಶೀಲಿಸಲು ಮುಂದಾಗಿರುವ ಕೆಇಆರ್‌ಸಿ, ಸಾರ್ವಜನಿಕರ ಅಭಿಪ್ರಾಯ ಮತ್ತು ಆಕ್ಷೇಪಣೆಗಳನ್ನು ಆಲಿಸಲು ಫೆಬ್ರವರಿ 16 ರಿಂದ ಫೆಬ್ರವರಿ 27 ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾರ್ವಜನಿಕ ವಿಚಾರಣಾ ಸಭೆಗಳನ್ನು ಆಯೋಜಿಸಿದೆ. ಈಗಾಗಲೇ ಮುಂದಿನ ಮೂರು ವರ್ಷಗಳ ಅವಧಿಗೆ ದರ ನಿಗದಿ ಮಾಡಲಾಗಿದ್ದರೂ, ಎಸ್ಕಾಂಗಳ ಅನಿರೀಕ್ಷಿತ ನಷ್ಟದ ಹಿನ್ನೆಲೆಯಲ್ಲಿ ಹೆಚ್ಚುವರಿ ದರ ಏರಿಕೆ ಮಾಡಲು ಆಯೋಗವು ಚಿಂತನೆ ನಡೆಸುತ್ತಿದೆ.

 ಈ ಸಾರ್ವಜನಿಕ ವಿಚಾರಣಾ ಪ್ರಕ್ರಿಯೆ ಮುಗಿದ ನಂತರ, ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಹೊಸ ಪರಿಷ್ಕೃತ ದರಗಳು ಪ್ರಕಟವಾಗುವ ನಿರೀಕ್ಷೆಯಿದೆ. ಒಂದು ವೇಳೆ ಆಯೋಗವು ದರ ಏರಿಕೆಗೆ ಒಪ್ಪಿಗೆ ನೀಡಿದರೆ, ಕೈಗಾರಿಕಾ ಮತ್ತು ವಾಣಿಜ್ಯ ಬಳಕೆದಾರರ ಜೊತೆಗೆ ಸಾಮಾನ್ಯ ಗ್ರಾಹಕರ ಮೇಲೆಯೂ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ.

Karnataka Power Tariff Hike Likely from April 1

Karnataka Power Tariff Hike Likely from April 1
Karnataka Power Tariff Hike Likely from April 1
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor