ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಂದ ಸಿಎಂ ಸಿದ್ದರಾಮಯ್ಯರಿಗೆ ಮಹತ್ವದ ಮನವಿ! ಎನಂದ್ರು ಮುಖ್ಯಮಂತ್ರಿ?

karnataka state government employees' association latest news / cs shadakshari

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಂದ ಸಿಎಂ ಸಿದ್ದರಾಮಯ್ಯರಿಗೆ ಮಹತ್ವದ ಮನವಿ! ಎನಂದ್ರು ಮುಖ್ಯಮಂತ್ರಿ?
karnataka state government employees' association latest news

SHIVAMOGGA  |  Jan 18, 2024  | karnataka state government employees' association latest news  ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ನಲ್ಲಿ ಸಿಎಂ ಸಿದ್ದರಾಮಯ್ಯ ರವರನ್ನ ಮುಖ್ಯವಾದ ಮನವಿ ಸಲ್ಲಿಸಿದೆ. ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಯವರು ಭರವಸೆಯನ್ನು ಸಹ ನೀಡಿದ್ದಾರೆ. 

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ 

  • ಎನ್.ಪಿ.ಎಸ್. ನೌಕರರ ಮಾಸಿಕ ವೈಯಕ್ತಿಕ ವಂತಿಗೆ ಕಟಾವಣೆ ಸ್ಥಗಿತಗೊಳಿಸುವುದು 

  • 7ನೇ ವೇತನ ಆಯೋಗದಿಂದ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಶೀಘ್ರ ಜಾರಿಗೊಳಿಸುವುದು.  

ರಾಜ್ಯ ಸರ್ಕಾರಿ ನೌಕರರ  ಬೇಡಿಕೆಗಳನ್ನು ಶೀಘ್ರ ಈಡೇರಿಸುವ ನಿಟ್ಟಿನಲ್ಲಿ ಆದೇಶ ಹೊರಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ  ಸಿ.ಎಸ್. ಷಡಾಕ್ಷರಿಯವರ ನಿಯೋಗ ಸಿಎಂರನ್ನು ಭೇಟಿ ಮಾಡಿತ್ತು. ಈ ವೇಳೆ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು ಇದ್ದರು.ಮುಖ್ಯಮಂತ್ರಿ  ಸಿದ್ಧರಾಮಯ್ಯರವರೊಂದಿಗೆ  ಗೃಹ ಕಛೇರಿ ಕೃಷ್ಣಾದಲ್ಲಿ  ಮಾತನಾಡಿದ ಮುಖಂಡರು ತಮ್ಮ ಮನವಿಯನ್ನು ಸಲ್ಲಸಿದರು. 

ಸಿಎಂ ಸಿದ್ದರಾಮಯ್ಯ ಭರವಸೆ 

ಸಂಘದ ಮನವಿಗೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು; ರಾಜ್ಯ 7ನೇ ವೇತನ ಆಯೋಗದಿಂದ ಶೀಘ್ರವಾಗಿ ವರದಿಯನ್ನು ಪಡೆದು ಅನುಷ್ಠಾನಗೊಳಿಸುವ ಭರವಸೆ ನೀಡಿದರು.

 ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವ ಸಲುವಾಗಿ ಈಗಾಗಲೇ ಸರ್ಕಾರದ ಹಂತದಲ್ಲಿ ಚರ್ಚೆಗಳು ನಡೆದಿದ್ದು, ಎನ್.ಪಿ.ಎಸ್. ರದ್ದತಿಯ ಭಾಗವಾಗಿ ಎನ್.ಪಿ.ಎಸ್ ನೌಕರರಿಂದ ಕಟಾವಣೆ ಮಾಡುತ್ತಿರುವ ವಂತಿಗೆಯನ್ನು ನಿಲ್ಲಿಸಲು ಭರವಸೆ ನೀಡಿದರು ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ ಎನ್.ಪಿ.ಎಸ್. ನೌಕರರ ಪರವಾಗಿ ನಮ್ಮ ಸರ್ಕಾರ ನಿಲ್ಲುತ್ತದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರು ಮತ್ತು ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ "ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆ.ಎ.ಎಸ್.ಎಸ್)" ಶೀಘ್ರದಲ್ಲೇ ಅನುಷ್ಟಾನಗೊಳಿಸಲಾಗುವೆಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.