
ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ರಾಜ್ಯದ ಹವಾಮಾನದಲ್ಲಿ (Karnataka Weather) ಮತ್ತೆ ಕೊಂಚ ಬದಲಾವಣೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಈ ಸಂಬಂಧ ಹೊರಬಿದ್ದ ಡೈಲಿಬುಲೆಟಿನ್ ಪ್ರಕಾರ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದರೆ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ.



ಅರ್ನಾಬ್ ಮತ್ತು ಮುರುಸು ಚಂಡಮಾರುತಗಳ ಪ್ರಭಾವ ಕಡಿಮೆಯಾಗಿದೆ, ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಸುರಿಯುತ್ತಿದ್ದ ಹಿಂಗಾರು ಮಳೆಯ ಪ್ರಮಾಣ ತಗ್ಗಿದೆ. ಪರಿಣಾಮ ಒಣಹವೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಆದರೆ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ]
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಒಣಹವೆ
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. ಈ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ಹಿಂಗಾರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮಲೆನಾಡಿನ ಬಹುತೇಕ ಪ್ರದೇಶಗಳಲ್ಲಿಯೂ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿಯೂ ಮುಖ್ಯವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಡಗು, ಮೈಸೂರು ಸೇರಿ ಕೆಲವೆಡೆ ಮಳೆ ಸಾಧ್ಯತೆ
ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಪ್ರದೇಶಗಳಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗುವ ನಿರೀಕ್ಷೆಯಿದೆ.ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಮಳೆ ಕಾಣಿಸಿಕೊಳ್ಳಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆಯ ಚಟುವಟಿಕೆ ಕಂಡುಬರುವ ನಿರೀಕ್ಷೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಮುಂದುವರಿಯಲಿದೆ.

