ಸುದ್ದಿಯ ಸ್ಥಳ: Sagara, Shivamogga, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ನವೆಂಬರ್ 11, 2026ರಿಂದ ಗುಜರಾತ್ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ರಾಷ್ಟ್ರಮಟ್ಟದ ಕೂಡೋ (Kudo) ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗ ನಗರದ ವಿನೋಬನಗರದ ಕಲ್ಲಹಳ್ಳಿಯಲ್ಲಿರುವ ಕೆಂಬ್ರಿಡ್ಜ್ ಪದವಿ ಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿ ಕುಮಾರ್ ಕಾರ್ತಿಕ್ ಸಾಗರ ಎಂ. ಅವರು ಆಯ್ಕೆಯಾಗಿದ್ದಾರೆ.
ಕ್ರೀಡಾ ಕ್ಷೇತ್ರದಲ್ಲಿ ಯುವ ವಿದ್ಯಾರ್ಥಿಯು ಸಾಧಿಸುತ್ತಿರುವ ಈ ಪ್ರಯತ್ನವು ಇಡೀ ಶಿಕ್ಷಣ ಸಂಸ್ಥೆಗೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ತಿಕ್ ಸಾಗರ ಅವರ ಈ ಸಾಧನೆಗೆ ಕೆಂಬ್ರಿಡ್ಜ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ, ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
