ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 09 2025: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ವಿವಿಧ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಸರ್ಕಾರಿ ಸಂಸ್ಥೆಗಳಲ್ಲಿ 708 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ,ಅರ್ಜಿ ಸಲ್ಲಿಸಲು ನವೆಂಬರ್ 11 ನೇ ತಾರೀಖು ಕೊನೆದಿನವಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA), ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ (KSDL), ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS) ಸೇರಿದಂತೆ ಒಟ್ಟು 8 ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ಭರ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. (Opportunity)
ಪ್ರಮುಖ ದಿನಾಂಕ ಮತ್ತು ಪರೀಕ್ಷಾ ವಿವರ KEA Recruitment 2025
- ಅರ್ಜಿ ಸಲ್ಲಿಕೆ ಪ್ರಾರಂಭ: ಅಕ್ಟೋಬರ್ 9 ರಿಂದ
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 11 ರವರೆಗೆ
- ನೇಮಕಾತಿ ವಿಧಾನ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
- ಪರೀಕ್ಷಾ ಸ್ವರೂಪ: ಪರೀಕ್ಷೆಯು ಒಎಂಆರ್ (OMR) ಆಧಾರಿತವಾಗಿರುತ್ತದೆ.
- ಋಣಾತ್ಮಕ ಮೌಲ್ಯಮಾಪನ (Negative Marking): ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳಿದ್ದು, ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗದಷ್ಟು (1/4) ಅಂಕವನ್ನು ಕಡಿತಗೊಳಿಸಲಾಗುತ್ತದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ನೇಮಕಾತಿ ಪ್ರಕ್ರಿಯೆಯನ್ನು ನಿರ್ವಹಿಸುತ್ತಿದೆ. ಒಂದೇ ಬಗೆಯ ಪಠ್ಯಕ್ರಮ ಹೊಂದಿರುವ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಂದೇ ಪರೀಕ್ಷೆಯನ್ನು ನಡೆಸಿ, ಆ ಬಳಿಕ ಸಂಬಂಧಪಟ್ಟ ಇಲಾಖೆಗಳಿಗೆ ಮೆರಿಟ್ ಪಟ್ಟಿಯನ್ನು ಕಳುಹಿಸಲಾಗುತ್ತದೆ ಎಂದು ನಿರ್ದೇಶಕ ಎಚ್. ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ. ಆಸಕ್ತ ಅಭ್ಯರ್ಥಿಗಳು ಪರೀಕ್ಷೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವುದು ಉತ್ತಮ ಎಂದು ಅವರು ತಿಳಿಸಿದ್ದಾರೆ.

ಪರೀಕ್ಷಾ ದಿನಾಂಕಗಳನ್ನು ನಂತರದ ದಿನಗಳಲ್ಲಿ ಪ್ರಕಟಿಸಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳು ಮತ್ತು ಅರ್ಜಿ ಸಲ್ಲಿಸಲು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ cetonline.Karnataka.gov.in/kea/ ಗೆ ಭೇಟಿ ನೀಡಬಹುದು.
KEA Recruitment 2025 Apply Online for 708 Government Jobs Across 8 Karnataka Departments
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!