ಕೇರಳದ ಟೂರಿಸ್ಟ್ ಬಸ್ ಮೇಲೆ ‘Dawood’ ಬರಹ! ಪೊಲೀಸರಿಂದ ಬಸ್ ವಶ

ಹಂಚಿಕೊಳ್ಳಿ
WhatsApp Facebook X Telegram
Kerala Tourist Bus Seized in Chikkamagaluru Over Dawood Ibrahim Writings
Kerala Tourist Bus Seized in Chikkamagaluru Over Dawood Ibrahim Writings

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಚಿಕ್ಕಮಗಳೂರು / ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ವೈಭವೀಕರಿಸುವ ರೀತಿಯ ಬರಹಗಳನ್ನು ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಕೇರಳದ ಟೂರಿಸ್ಟ್ ಬಸ್ ಒಂದನ್ನ ಚಿಕ್ಕಮಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ಸಿನ ಮೇಲಿದ್ದ ಬರಹಗಳಿಗೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ, ಬಸ್ಸನ್ನು ತಡೆದ ನಂತರ ಈ ಬೆಳವಣಿಗೆ ನಡೆದಿದೆ.

ಕೇರಳ ಟೂರಿಸ್ಟ್ ಬಸ್ ನಲ್ಲಿ ದಾವೋದ್ ಬರಹ

ಕೇರಳ ಮೂಲದ ಪ್ರವಾಸಿ ಬಸ್ಸಿನ ಮೇಲೆ ‘Dawood Rise of Day’ ಹಾಗೂ ‘Emperor Strikes Again’ ಎಂಬ ಬರಹಗಳನ್ನು ಬರೆಯಲಾಗಿತ್ತು. ಈ ಬರಹಗಳು ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ವೈಭವೀಕರಿಸುವಂತಿವೆ ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಕುರಿತಾಗಿ ಪೊಲೀಸರಿಗೆ ಮಾಹಿತಿ ನೀಡಿದರು.

ಚಿಕ್ಕಮಗಳೂರಿನಲ್ಲಿ ನಿನ್ನೆ ದಿನ ಇದೇ ದೊಡ್ಡ ಸುದ್ದಿಯಾಗಿದ್ದು, ನಗರದಲೆಡೆ ಸಂಚರಿಸುತ್ತಿದ್ದ ಬಸ್ಸನ್ನು ಗಮನಿಸಿದ ಸಂಘಟನೆಗಳ ಕಾರ್ಯಕರ್ತರು ಅದರ ಮೇಲಿನ ಬರಹಗಳಿಗೆ ವಿರೋಧ ವ್ಯಕ್ತಪಡಿಸಿ, ಬಸ್ಸನ್ನು ಅಡ್ಡಗಟ್ಟಿ ನಿಲ್ಲಿಸಿದ್ದರು. ವಿವಾದ ಜೋರಾದ ಹಿನ್ನೆಲೆಯಲ್ಲಿ ಪೊಲೀಸರು ಸೀಜ್ ಮಾಡಿ ವಿಚಾರಣೆ ಮುಂದುವರಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor