ಶಿವಮೊಗ್ಗ /ಮಲೆನಾಡು ಟುಡೆ ಸುದ್ದಿ / Minister Madhu Bangarappa/ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್. ಮಧು ಬಂಗಾರಪ್ಪ ನಾಳೆ ಮತ್ತು ನಾಡಿದ್ದು ಅಂದರೆ, ಮಾರ್ಚ್ 14 ಮತ್ತು 15 ರಂದು ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ವ್ಯಾಪಕ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ವೇಳೆ ಮಧು ಬಂಗಾರಪ್ಪ ವಿವಿಧ ನೂತನ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ

ಶಿವಮೊಗ್ಗ: ಯುವಕನಿಗೆ 20 ವರ್ಷ ಜೈಲು ಶಿಕ್ಷೆ, 1 ಲಕ್ಷ ದಂಡ, ಕಾರಣವೇನು ಗೊತ್ತಾ,,?
ಮಧು ಬಂಗಾರಪ್ಪರವರ ಜಿಲ್ಲಾ ಪ್ರವಾಸ/Minister Madhu Bangarappa tour
- ಮಾರ್ಚ್ 14 ರ ಶನಿವಾರ ಸಚಿವರು, ಮುಂಜಾನೆ 9.30 ಗಂಟೆಗೆ ಜಿಲ್ಲೆಯ ಹೊಳೆಹೊನ್ನೂರು ನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟಿನ್ ಅನ್ನು ಉದ್ಘಾಟಿಸಲಿದ್ದಾರೆ.
- ತದನಂತರ ಬೆಳಿಗ್ಗೆ 11.30 ಗಂಟೆಗೆ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಗೆ ಒಳಪಡುವ ಆಲ್ಕೋಳ ವೃತ್ತದಿಂದ ಡಿ.ವಿ.ಜಿ. ವೃತ್ತದವರೆಗೆ ಸಂಪರ್ಕ ಕಲ್ಪಿಸುವ 100 ಅಡಿ ಅಗಲದ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ರಸ್ತೆ ಎಂದು ನಾಮಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಾಮಫಲಕವನ್ನು ಅನಾವರಣಗೊಳಿಸಲಿದ್ದಾರೆ.
- ಇದೇ ಕಾರ್ಯಕ್ರಮದಲ್ಲಿ ಗೋಪಾಲಗೌಡ ಬಡಾವಣೆಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಿರ್ಮಾಣವಾಗಿರುವ 290 ಮನೆಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ ಹಾಗೂ ಆಶ್ರಯ ಯೋಜನೆಯಡಿ ಆಯ್ಕೆಯಾಗಿರುವ ಅರ್ಹ ಫಲಾನುಭವಿಗಳಿಗೆ ಮನೆಗಳ ಕೀಲಿ ಕೈಗಳನ್ನು ಹಸ್ತಾಂತರಿಸಲಿದ್ದಾರೆ.
- ಶನಿವಾರ ಮಧ್ಯಾಹ್ನ 1.30 ಗಂಟೆಗೆ ಬೊಮ್ಮನಕಟ್ಟೆ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಸಚಿವರು ಉದ್ಘಾಟಿಸಲಿದ್ದಾರೆ.
- ಸಂಜೆ 4.00 ಗಂಟೆಗೆ ನಗರದ ಸುವರ್ಣ ಸಂಸ್ಕೃತಿ ಭವನದ ಆವರಣದಲ್ಲಿರುವ ರಂಗಾಯಣದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಪಿ. ಲಂಕೇಶ್ ಬಯಲು ರಂಗಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ.
- ಬಳಿಕ ಸಂಜೆ 5.00 ಗಂಟೆಗೆ ಚಾಲುಕ್ಯನಗರದ ಸಾಹಿತ್ಯಗ್ರಾಮದಲ್ಲಿ ಆಯೋಜಿಸಲಾಗಿರುವ ಜಿಲ್ಲೆಯ ಇಪ್ಪತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ನುಡಿನಮನ ಸಲ್ಲಿಸಲಿದ್ದಾರೆ.
- ಮಾರ್ಚ್ 15 ರ ಭಾನುವಾರದಂದು ಬೆಳಿಗ್ಗೆ 9.30 ಗಂಟೆಗೆ ಸೊರಬ ತಾಲ್ಲೂಕಿನ ಆನವಟ್ಟಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.
- ಆನಂತರ ಬೆಳಿಗ್ಗೆ 10.30 ಗಂಟೆಗೆ ಅದೇ ತಾಲ್ಲೂಕಿನ ಚಿತ್ರಟ್ಟೆಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಖನಿಜಗಳ ನಿಯಮಿತದ ಸಿ.ಎಸ್.ಆರ್. ಅನುದಾನದಡಿ ನಿರ್ಮಿಸಲಾಗುತ್ತಿರುವ ಗ್ರಾಮೀಣ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
- ಬೆಳಿಗ್ಗೆ 11.00 ಗಂಟೆಗೆ ಸೊರಬ ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ.
- ಇದೇ ವೇದಿಕೆಯಲ್ಲಿ ಅಕ್ಷರದಾಸೋಹ ಯೋಜನೆಯಡಿ ಸೇವೆ ಸಲ್ಲಿಸಿ ನಿವೃತ್ತರಾದ ಅಡುಗೆ ಸಿಬ್ಬಂದಿಗಳನ್ನು ಸನ್ಮಾನಿಸಿ ಅಭಿನಂದಿಸಲಿದ್ದಾರೆ.
- ಜೊತೆಗೆ ಮೀನುಗಾರಿಕೆ ಇಲಾಖೆಯ ವತಿಯಿಂದ 2025-26 ನೇ ಸಾಲಿನ 30 ಜನ ಫಲಾನುಭವಿಗಳಿಗೆ ಮೀನುಗಾರಿಕೆ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿಯೂ ಸಚಿವರು ಭಾಗವಹಿಸಲಿದ್ದಾರೆ.
- ಅಂತಿಮವಾಗಿ ಮಧ್ಯಾಹ್ನ 12.00 ಗಂಟೆಗೆ ಶಿಕಾರಿಪುರದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಮಾಡಲಿದ್ದಾರೆ.

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.