ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್‌ಗೆ ಪ್ರತಿಷ್ಠಿತ ‘ಎಸ್.ಎಂ. ಕೃಷ್ಣ ಪ್ರಶಸ್ತಿ ಗರಿ

ಹಂಚಿಕೊಳ್ಳಿ
WhatsApp Facebook X Telegram
kimmane ratnakar
kimmane ratnakar ಕಿಮ್ಮನೆ ರತ್ನಾಕರ್​

ಮಂಡ್ಯ: ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಪ್ರಥಮ ವರ್ಷದ ಎಸ್.ಎಂ. ಕೃಷ್ಣ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಡ್ಯದ ಕರ್ನಾಟಕ ಸಂಘವು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಗುರುತಿಸಲು ಈ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ರಾಜಕೀಯ ಕ್ಷೇತ್ರದಲ್ಲಿನ ಸೇವೆಗಾಗಿ ತೀರ್ಥಹಳ್ಳಿಯ ಕಿಮ್ಮನೆ ರತ್ನಾಕರ್ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

Kimmane Ratnakar ಪ್ರಶಸ್ತಿಯ ವಿವರ

ಎಸ್.ಎಂ. ಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿತವಾಗಿರುವ ಈ ದತ್ತಿನಿಧಿ ಪ್ರಶಸ್ತಿಯು 50,000 ರೂಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಕರ್ನಾಟಕ ಸಂಘವು ಪ್ರತಿ ವರ್ಷ ರಾಜಕೀಯ, ಸಂಗೀತ ಅಥವಾ ಕ್ರೀಡಾ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಒಬ್ಬ ಸಾಧಕರನ್ನು ಆಯ್ದು ಈ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಮೊದಲ ವರ್ಷವೇ ಕಿಮ್ಮನೆ ರತ್ನಾಕರ್ ಅವರ ಸಾಧನೆಯನ್ನು ಪರಿಗಣಿಸಿರುವುದು ವಿಶೇಷವಾಗಿದೆ. 

ಈ ಸಮಾರಂಭವು ಇದೇ ಬರುವ ಮೇ 05, 2026 ರಂದು ಮಂಡ್ಯದ ಕರ್ನಾಟಕ ಸಂಘದ ಆವರಣದಲ್ಲಿರುವ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಈಗಾಗಲೇ ಸಂಘದ ಪದಾಧಿಕಾರಿಗಳು ದೂರವಾಣಿ ಮೂಲಕ ಕಿಮ್ಮನೆ ರತ್ನಾಕರ್ ಅವರನ್ನು ಸಂಪರ್ಕಿಸಿ ಒಪ್ಪಿಗೆ ಪಡೆದಿದ್ದು, ಅಂದು ಅವರು ಸಾರ್ವಜನಿಕವಾಗಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Kimmane Ratnakar Selected for S.M. Krishna Award

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor