SHIVAMOGGA | MALENADUTODAY NEWS | ಮಲೆನಾಡು ಟುಡೆ Nov 7, 2024
ಕರ್ನಾಟಕ ಸರ್ಕಾರದ ಅಧಿಸೂಚನೆಯನ್ವಯ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‌ಗೆ ರೂ.2400/- ರ ಬೆಲೆಯಲ್ಲಿ ಖರೀದಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆ.ಜಿ. ಪ್ರಮಾಣದಷ್ಟು ಮೆಕ್ಕೆಜೋಳದ ಮಾದರಿಯನ್ನು ನೀಡಿ, FRUITS ತಂತ್ರಾಂಶದಲ್ಲಿ ನೋಂದಾವಣೆಯಾಗಿರುವ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬಹುದಾಗಿದೆ. ನೋಂದಣಿ ಪ್ರಕ್ರಿಯೆಯು ನ.11 ರಿಂದ ಪ್ರಾರಂಭವಾಗುತ್ತಿದ್ದು ದಾವಣೆಗೆರೆ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆದಿರುತ್ತದೆ.
ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಸರಕಾರದ ಕೃಷಿ ಇಲಾಖೆ ಸಿದ್ದಪಡಿಸಿರುವ FRUITS ತಂತ್ರಾAಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಅನುಷ್ಟಾನಕ್ಕೆ ತರುತ್ತಿದ್ದು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆದ ಆಸಕ್ತ ರೈತರು, ತಮ್ಮ ಮೆಕ್ಕೆಜೋಳದ ಮಾದರಿಗಳನ್ನು ತಮ್ಮ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ನೀಡಬಹುದು.
ಪ್ರತಿ ಒಬ್ಬ ರೈತರಿಂದ ಗರಿಷ್ಟ 500 ಕ್ವಿಂಟಾಲ್ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಿದ್ದು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ಸೊರಬ, ಸಾಗರ ವ್ಯಾಪ್ತಿಯಲ್ಲಿ ಡಾ.ಶರತ್, ಉಪ ವ್ಯವಸ್ಥಾಪಕರು, ಮೊ.ಸಂ: 7760970616 ಇವರನ್ನು, ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿಗೆ ಸಂಬAಧಿಸಿದAತೆ ಡಾ.ಸೂರಜ್, ಸಹಾಯಕ ವ್ಯವಸ್ಥಾಪಕರು ಮೊ.ಸಂ: 9844346640 ಹಾಗೂ ನ್ಯಾಮತಿ ತಾಲ್ಲೂಕು ವ್ಯಾಪ್ತಿಗೆ ಸಂಬಂಧಪಟ್ಟಂತೆ ಹರೀಶ್ ಕರೇಗೌಡ, ಸಹಾಯಕ ವ್ಯವಸ್ಥಾಪಕರು ಮೊ.ಸಂ: 7399530405 ರನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಹಾಮ ಪಶುಘಟಕ, ಶಿಕಾರಿಪುರ ಮೊ.ಸಂ: 9606012571 ನ್ನು ಸಂಪರ್ಕಿಸಬಹುದೆಂದು ಪ್ರಧಾನ ವ್ಯವಸ್ಥಾಪಕರು, ಕಹಾಮ ಪಶು ಆಹಾರ ಘಟಕ, ಶಿಕಾರಿಪುರ ಇವರು ತಿಳಿಸಿದ್ದಾರೆ.
SUMMARY | In order to help the farmers who have grown maize as per the notification of the Government of Karnataka, the Karnataka Milk Federation will purchase maize directly from the farmers at a price of Rs.2400/- per quintal, the release said.
KEYWORDS | farmers , maize, as per the notification of the Government of Karnataka, Karnataka Milk Federation , purchase maize directly from the farmers,