ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಇಂಟರ್ನೆಟ್ ಮೂಲಕ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ತಮಗೆ ಸೂಕ್ತ ಭದ್ರತೆ ನೀಡುವಂತೆ ಶಿವಮೊಗ್ಗ ಎಸ್ಪಿ ನಿಖಿಲ್ ಬಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇಂದು ತಮ್ಮ ಪುತ್ರ ಕೆ.ಇ. ಕಾಂತೇಶ್ ಹಾಗೂ ರಾಷ್ಟ್ರಭಕ್ತ ಬಳಗದ ಕಾರ್ಯಕರ್ತರೊಂದಿಗೆ ಎಸ್ಪಿ ಕಚೇರಿಗೆ ಭೇಟಿ ನೀಡಿ ರಕ್ಷಣೆ ಕೋರಿದರು.

ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ
ಕಳೆದ ಎರಡು ವರ್ಷಗಳ ಹಿಂದೆಯೂ ಈಶ್ವರಪ್ಪ ಅವರಿಗೆ ವಿದೇಶದಿಂದ ಇಂತಹದ್ದೇ ಜೀವ ಬೆದರಿಕೆ ಕರೆಗಳು ಬಂದಿದ್ದವು. ಆ ಸಮಯದಲ್ಲಿ ಸರ್ಕಾರ ಅವರಿಗೆ ಭದ್ರತೆಯನ್ನು ಒದಗಿಸಿತ್ತು. ಆದರೆ, ಕಳೆದ ಕೆಲವು ತಿಂಗಳುಗಳ ಹಿಂದೆ ರಾಜ್ಯ ಸರ್ಕಾರವು ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ಹಿಂಪಡೆದಿತ್ತು. ಇದೀಗ ಮತ್ತೆ ಅಪರಿಚಿತರು ಇಂಟರ್ನೆಟ್ ಕರೆ ಮೂಲಕ ಬೆದರಿಕೆ ಹಾಕುತ್ತಿರುವುದರಿಂದ ಈಶ್ವರಪ್ಪ ಆತಂಕ ವ್ಯಕ್ತಪಡಿಸಿದ್ದು, ಪೊಲೀಸ್ ಇಲಾಖೆಯ ಮೆಟ್ಟಿಲೇರಿದ್ದಾರೆ.
ವಿದೇಶದಿಂದ ನೇರವಾಗಿ ಮೊಬೈಲ್ ಸಂಖ್ಯೆಗೆ ಇಂಟರ್ನೆಟ್ ಕರೆ ಬಂದಿದ್ದು, ರಿಸೀವ್ ಮಾಡುವಷ್ಟರಲ್ಲಿ ಕರೆ ಕಟ್ ಆಗಿದೆ ಎಂದು ಅವರು ವಿವರಿಸಿದ್ದಾರೆ. ತಮಗೆ ಹಿಂದಿನಂತೆಯೇ Y ಶ್ರೇಣಿಯ ಭದ್ರತೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
KS Eshwarappa Receives Threat Call from Abroad
