SHIVAMOGGA NEWS TODAY

ಸಂಸದ ರಾಘವೇಂದ್ರರಿಗೆ ಅಭಿನಂದನೆ ಸಲ್ಲಿಸಿ ,ಮೋದಿ ಭೇಟಿಗೆ ಅವಕಾಶ ಕೋರಿದ ಕೆ ಎಸ್​ ಈಶ್ವರಪ್ಪ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಜಿಲ್ಲೆಯ ಪರಿಸರ ಸಂರಕ್ಷಣೆ ಮತ್ತು ಪಶ್ಚಿಮ ಘಟ್ಟಗಳ ಉಳಿವಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ವಿವಾದಿತ ಯೋಜನೆಗೆ ಕೇಂದ್ರ ಸರ್ಕಾರ ಇದುವರೆಗೆ ಅನುಮತಿ ನೀಡಿಲ್ಲ ಎಂಬ ಸಂಸದರ ಹೇಳಿಕೆಯನ್ನು ಅವರು ಸ್ವಾಗತಿಸಿದ್ದಾರೆ. 

ಶಿವಮೊಗ್ಗ: ರೈಲ್ವೆ ಸ್ಟೇಷನ್ ಬಳಿ ನಿಂತಿದ್ದ ಗೂಡ್ಸ್ ಲಾರಿ ಬೆಂಕಿಗೆ ಭಸ್ಮ; ತಪ್ಪಿದ ಭೀಕರ ದುರಂತ!

ಇಂದು ಈ ಕುರಿತು ಶಿವಮೊಗ್ಗದ ಪತ್ರಿಕಾ ಭವದನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ತಜ್ಞರ ಸಮಿತಿಯು ಸದರಿ ಯೋಜನೆಯು ಆರ್ಥಿಕವಾಗಿ ಲಾಭದಾಯಕವಲ್ಲ ಎಂದು ವರದಿ ನೀಡಿದೆ. ಅಲ್ಲದೆ, ಕೇಂದ್ರ ವನ್ಯಜೀವಿ ಮಂಡಳಿಯ ಐಎಫ್‌ಎಸ್ ಅಧಿಕಾರಿ ಪ್ರಣೀತಾ ಕೌರ್ ಅವರು ಅಧ್ಯಯನ ನಡೆಸಿ, ಯೋಜನೆಯಿಂದ ಅಪಾರ ಪರಿಸರ ನಾಶವಾಗುವುದರಿಂದ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಶಿಫಾರಸು ಮಾಡಿರುವುದು ಪರಿಸರ ಪ್ರೇಮಿಗಳಿಗೆ ಜಯ ಸಿಕ್ಕಂತಾಗಿದೆ ಎಂದು ಈಶ್ವರಪ್ಪ ತಿಳಿಸಿದರು.

ಈ ಯೋಜನೆಯ ವಿರುದ್ಧ ಬಂಗಾರಮಕ್ಕಿಯ ಮಾರುತಿ ಗುರೂಜಿ, ಮೂಲೆಗದ್ದೆಯ ಅಭಿನವ ಚನ್ನಬಸವ ಸ್ವಾಮೀಜಿ, ಬೆಕ್ಕಿನಕಲ್ಪಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ಸೇರಿದಂತೆ ಅನೇಕ ಗಣ್ಯರು ಹಾಗೂ ಪರಿಸರ ಹೋರಾಟಗಾರರಾದ ಎ.ಟಿ.ರಾಮಸ್ವಾಮಿ, ಸಂಜಯ್ ಗುಬ್ಬಿ ಅವರು ನಡೆಸಿದ ಸತ್ಯಾಗ್ರಹಗಳು ಕೇಂದ್ರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿವೆ. ನ್ಯಾಯಾಲಯ ಕೂಡ ಸದ್ಯಕ್ಕೆ ಯಾವುದೇ ಚಟುವಟಿಕೆ ನಡೆಸದಂತೆ ನಿರ್ಬಂಧ ಹೇರಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. 

ಪಶ್ಚಿಮ ಘಟ್ಟಗಳ ಮೇಲಾಗುವ ದುಷ್ಪರಿಣಾಮಗಳ ಕುರಿತು ಪರಿಸರ ಹೋರಾಟಗಾರರ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲು ಬಯಸಿದೆ. ಈ ನಿಟ್ಟಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಪ್ರಧಾನಿಗಳ ಭೇಟಿಗೆ ಸಮಯ ನಿಗದಿಪಡಿಸಿಕೊಡಬೇಕು ಎಂದು ಈಶ್ವರಪ್ಪ ಮನವಿ ಮಾಡಿದರು.

 Ks Eshwarappa Thanks MP BY Raghavendra 

 Ks Eshwarappa Thanks MP BY Raghavendra 
 Ks Eshwarappa Thanks MP BY Raghavendra 
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.