ಸರ್ಕಾರಿ ಜಾಬ್​ಗೆ ಅಪ್ಲೆ ಮಾಡ್ತಿದ್ದೀರಾ! ಬ್ಯಾಂಕ್​ನಲ್ಲಿ ಕೆಲಸ ಹುಡುಕುತ್ತಿದ್ದೀರಾ! ಈ ಸುದ್ದಿ ನಿಮಗೆ ಉಪಯುಕ್ತ!

ajjimane ganesh

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025  : ನೀವು ಡಿಗ್ರಿ ಮಾಡಿದ್ದು ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ! ಕೇಂದ್ರ ಸರ್ಕಾರ ವಿವಿವಿಧ ಹುದ್ದೆಗಳ ಪರೀಕ್ಷೆ ಬರೆಯಲು ಸಿದ್ಧತೆ ನಡೆಸ್ತಿದ್ದಾರಾ? ಹಾಗಾದರೆ ಈ ಸುದ್ದಿ ನಿಮಗಾಗಿ. 

ನೀವು ಪದವೀಧರರಾಗಿದ್ದು, ಬ್ಯಾಂಕಿಂಗ್ ಅಥವಾ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಹುದ್ದೆ ಪಡೆಯಲು ಬಯುಸುತ್ತಿದ್ದರೆ. ನಿಮಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು KSOU ನ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ನಿಮಗೆ ತರಭೇತಿ ನೀಡಲಿದೆ. 

  • ಇದಕ್ಕಾಗಿ ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.
  • ಈ ತರಬೇತಿಯು ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯವಾದ ಎಲ್ಲಾ ಕೌಶಲ್ಯ ಮತ್ತು ಜ್ಞಾನವನ್ನು ಒದಗಿಸುತ್ತದೆ. 
  • ಯಾವುದೇ ಪದವಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಈ ತರಬೇತಿಗೆ ಸೆ. 30 ರೊಳಗಾಗಿ ನೋಂದಾಯಿಸಿಕೊಳ್ಳುವಂತೆ ಕುಲಸಚಿವ ಪ್ರೊ. ನವೀನ್‌ಕುಮಾರ್ ಎಸ್.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2515944/9964760090ನ ನ್ನು ಸಂಪರ್ಕಿಸಬಹುದಾಗಿದೆ. 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

KSOU Offers Special Training for Banking and Central Govt Job Exams in Shivamogga

Share This Article