ksrtc bus accident : ಬೆಳ್ಳಂಬೆಳಿಗ್ಗೆ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ | ಮೂವರಿಗಹೆ ಗಂಭೀರ ಗಾಯ
ksrtc bus accident ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಬೇಡರಹೊಸಳ್ಳಿ ಗ್ರಾಮದ ಬಳಿ ಇಂದು ಬೆಳ್ಳಂಬೆಳಿಗ್ಗೆ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು, ಮೂವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.
ರಾಯಚೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಬೇಡರಹೊಸಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 29 ಜನ ಪ್ರಯಾಣಿಕರಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತರ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಚಾಲಕನ ಅತಿ ವೇಗ ಅಥವಾ ನಿದ್ರೆ ಮಂಪರು ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
