ಸಾಗರದ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದೀಪ್ (41) ಅವರು ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಸಾಗರದ ಮಾರಿಕಾಂಬ ದೇವಾಲಯದ ಹಿಂಭಾಗದ ರಸ್ತೆಯ ನಿವಾಸಿಗಳಾಗಿದ್ದ ಸಂದೀಪ್ ಅವರು ಬುಧವಾರ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ತೀವ್ರವಾದ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣಕ್ಕೆ ಅವರ ಸಹೋದ್ಯೋಗಿಗಳು ಅವರನ್ನು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸದ್ಯ ಸಂದೀಪ್ ಅವರ ಮೃತದೇಹವನ್ನು ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದೆ.
KSRTC Staff Death


