ಕುಮಾರ್ ಬಂಗಾರಪ್ಪ ಕಾಂಗ್ರೆಸ್​ಗೆ ಕರೆದುಕೊಂಡು ಬರುತ್ತಾರಾ? ಏನಿದು ಹೊಸ ಬಾಯಿ ಪಟಾಕಿ!

ಹಂಚಿಕೊಳ್ಳಿ
WhatsApp Facebook X Telegram
kumar-bangarappa-congress-joining-gopalakrishna-belur-statement
kumar-bangarappa-congress-joining-gopalakrishna-belur-statement

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನ ನಡೆಯುತ್ತಿದೆಯಾ? ಹೀಗೊಂದು ಪ್ರಯತ್ನದ ಸೂಚನೆ ಹಲವು ಸಲ ಸಿಕ್ಕಿತ್ತು! ಇದೀಗ ಮತ್ತೊಮ್ಮೆ ಅದೇ ಸೂಚನೆ ಹೊಸದಾಗಿ ವ್ಯಕ್ತವಾಗಿದೆ. ಇದಕ್ಕೆ ಸಾಕ್ಷಿಯಾಗಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿಕೆ.

ಕಳೆದ ವಿಧಾನಸಭೆ ಚುನಾವಣೆ ವೇಳೆಯಲ್ಲಿಯೂ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇತ್ತು. ಆದರೆ ಕೊನೆಯ ಗಳಿಗೆಯಲ್ಲಿ ಅದು ಸಾಧ್ಯವಾಗಲಿಲ್ಲ ಎಂದು ಬೇಳೂರು ಗೋಪಾಲಕೃಷ್ಣ ನಿನ್ನೆ ಮಾತನಾಡಿದ್ದಾರೆ. ಡಿಸಿಸಿ ಬ್ಯಾಂಕ್ ಅಮೃತ ಮಹೋತ್ಸವ ಕಟ್ಟಡದ ಶಂಕುಸ್ಥಾಪನಾ ಸಮಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರೀ ಹುಮ್ಮಸ್ಸಿನಲ್ಲೇ ಮಾತನಾಡಿದರು.

ಶಿಕಾರಿಪುರದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ನಡೆಸಿದ ವಾಗ್ದಾಳಿಗೆ ಅಸಮಾಧಾನ ವ್ಯಕ್ತಪಡಿಸ್ತಾ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೇಗೆ ಗೆದ್ದು ಬರುತ್ತೀರಿ ಎಂಬ ರೀತಿಯಲ್ಲಿ ಮಧು ಬಂಗಾರಪ್ಪ ಅವರಿಗೆ ರಾಘವೇಂದ್ರ ಸವಾಲು ಹಾಕಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೇ ಕುಮಾರ್ ಬಂಗಾರಪ್ಪ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರೆ ಪರಿಸ್ಥಿತಿ ಬೇರೆಯಾಗುತ್ತಿತ್ತು. ಕೊನೆಯ ಗಳಿಗೆಯಲ್ಲಿ ಅವರು ಪಕ್ಷ ಸೇರುವುದು ಸಾಧ್ಯವಾಗಲಿಲ್ಲ. ಈ ಬಾರಿ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆದಿದೆ. ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ ಎಂದರು

ಏಕವಚನದಲ್ಲಿ ಮಾತನಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸ್ತಾ “ನಾವು ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯವನ್ನಷ್ಟೇ ಅಲ್ಲ, ನೀವು ಹಾಗೂ ನಿಮ್ಮ ಸಹೋದರ ಬಿ.ವೈ. ವಿಜಯೇಂದ್ರ ಅವರ ರಾಜಕೀಯವನ್ನೂ ನೋಡಿಕೊಂಡು ಬಂದಿದ್ದೇವೆ. ನಾವು ಕೂಡ ಏಕವಚನದಲ್ಲಿ ಮಾತನಾಡಲು ಆರಂಭಿಸಿದರೆ ಪರಿಸ್ಥಿತಿ ಬೇರೆಯಾಗುತ್ತದೆ. ಆದರೂ ಅವರಿಗೆ ಗೌರವ ಕೊಡುತ್ತೇವೆ” ಎಂದರು.

ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸ್ತಾ ಅವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಸ್ಥಾನ ಸಿಗದ ಬೇಸರದಿಂದ ಮಾತನಾಡಿರಬಹುದು. ಆದರೆ ಪಕ್ಷದ ಆಂತರಿಕ ಸಂಗತಿಗಳನ್ನು ಬಹಿರಂಗವಾಗಿ ಮಾತನಾಡುವುದು ಸರಿಯಲ್ಲ. ಅನಾರೋಗ್ಯದ ಕಾರಣದಿಂದ ಅವರು ಹಾಗೆ ಮಾತನಾಡಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ ಎಂದರು.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor