ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮೆಸ್ಕಾಂ ವಿದ್ಯುತ್ ವಿತರಣೆ ಕೇಂದ್ರ ಹಾಗೂ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು, ಸೆಪ್ಟೆಂಬರ್ 9ರಂದು ಕುಂಸಿ ಹಾಗೂ ಭದ್ರಾವತಿ ಭಾಗದ ಹಲವು ಗ್ರಾಮ ಮತ್ತು ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕುಂಸಿ ಭಾಗದ ಈ ಗ್ರಾಮಗಳಲ್ಲಿ ಕರೆಂಟ್ ಇರಲ್ಲ
ಕುಂಸಿಯ ಸ್ಥಳೀಯ ವಿದ್ಯುತ್ ವಿತರಣೆ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 9ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಬಾಳೆಕೊಪ್ಪ, ಚೋರಡಿ, ತುಷ್ಟೂರು, ಚಾಮೇನಹಳ್ಳಿ, ವಿಠಗೊಂಡನಕೊಪ್ಪ, ಕೆಸುವಿನಕಟ್ಟೆ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ನಾಗರಬಾವಿ, ಸುತ್ತುಕೋಟೆ, ಬೈರನಕೊಪ್ಪ, ಕ್ಯಾಂಪ್, ಮೈಸವಳ್ಳಿ, ಸೇವಾಲಾಲ್ ನಗರ, ವಾಲಕೇಶಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಭದ್ರಾವತಿಯ ಹಲವು ಬಡಾವಣೆಗಳಲ್ಲೂ ಪವರ್ ಕಟ್
ಭದ್ರಾವತಿ ಮೆಸ್ಕಾಂ ನಗರ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 9ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಸೀಗೇಬಾಗಿ, ಹಳೇ ಸೀಗೇಬಾಗಿ ರಸ್ತೆ, ಭದ್ರಾ ಕಾಲೊನಿ, ಸತ್ಯಸಾಯಿ ನಗರ, ಸೈಯ್ಯದ್ ಕಾಲೊನಿ, ಕಣಕಟ್ಟೆ, ವೀರಾಪುರ, ರಾಮನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
