Kumsi PS limits incident ಶಿವಮೊಗ್ಗ: ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನ ಕೊಲೆ – ಇಬ್ಬರು ಆರೋಪಿಗಳ ಬಂಧನಕ್ಕೆ ಬಲೆ
Shivamogga news ಕುಂಸಿ ,ಶಿವಮೊಗ್ಗ: ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 32 ವರ್ಷದ ಯುವಕ ವಾಸು ಎಂಬುವವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಕೃತ್ಯದ ಹಿಂದೆ ಮೃತನ ಪರಿಚಿತರೇ ಆದ ಇಬ್ಬರು ವ್ಯಕ್ತಿಗಳ ಕೈವಾಡವಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.

Kumsi PS limits incident
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಅನೈತಿಕ ಸಂಬಂಧವೇ ಕಾರಣವಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಮಾದ್ಯಮಗಳಿಗೆ ವಾಟ್ಸಾಪ್ ಮೂಕ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ರವರು ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆಯುವುದಾಗಿ ಹೇಳಿದ್ದು, ಘಟನೆ ಬಗ್ಗೆ ತನಿಖೆ ಮುಂದುವರೆದಿರುವುದಾಗಿ ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಮೃತ ಯುವಕ ಆರೋಪಿಗಳ ತಾಯಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಆರೋಪ ಕೇಳಿಬಂದಿದೆ. ಇದೆ ಕಾರಣಕ್ಕೆ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದ್ದು, ಈ ಸಂಬಂಧ ಇನ್ನಷ್ಟೆ ತನಿಖೆ ನಡೆಯಬೇಕಿದೆ
Kumsi murder, Shivamogga crime, Vasu murder, Kuruba community murder, Adi Karnataka accused, machete murder, illicit relationship motive, Kumsi police, murder investigation,
Shivamogga news, Karnataka crime, homicide case, murder suspects, recent murders Shivamogga, Kumsi PS limits.