SHIVAMOGGA| Dec 15, 2023 | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ವಿಮಾನ ನಿಲ್ದಾಣ ಎಂದು ಹೆಸರಿಡಬೇಕು ಎಂದು ಈ ಹಿಂದೇ ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಿತ್ತು.
ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಪ್ರಕ್ರಿಯೆ ನಡೆದಿದ್ದವು. ಇದರ ನಡುವೆ ಕುವೆಂಪು ವಿಮಾನ ನಿಲ್ದಾಣವೆಂದು ಶಿವಮೊಗ್ಗ ಏರ್ಪೋರ್ಟ್ಗೆ ಹೆಸರು ಇಡುತ್ತಿಲ್ಲ. ಟಿಕೆಟ್ನಲ್ಲಿಯು ಸಹ ಶಿವಮೊಗ್ಗ ವಿಮಾನ ನಿಲ್ದಾಣ ಎಂದೇ ಪ್ರಿಂಟ್ ಆಗುತ್ತಿದೆ ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದರು. ಅಲ್ಲದೆ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.
ಈ ನಡುವೆ ರಾಜ್ಯ ಕಾಂಗ್ರೆಸ್ ಸರ್ಕಾರ, ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ರಾಜ್ಯದ ಮಹಾನ್ ವ್ಯಕ್ತಿಗಳ ಹೆಸರಿಡುವ ಮಹತ್ವದ ನಿರ್ಣಯವನ್ನು ವಿಧಾನಸಭೆ, ವಿಧಾನ ಪರಿಷತ್ನಲ್ಲಿ ಸರ್ವಾನುಮತದಿಂದ ಕೈಗೊಂಡಿದೆ. ಈ ನಿರ್ಣಯದಲ್ಲಿ ನಾಲ್ಕು ಹೆಸರುಗಳನ್ನ ಪ್ರಸ್ತಾಪಿಸಿ ಕೇಂದ್ರಕ್ಕೆ ಕಳುಹಿಸಲು ತೀರ್ಮಾನಿಸಲಾಯಿತು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ- ಕಿತ್ತೂರು ರಾಣಿ ಚೆನ್ನಮ್ಮ, ವಿಜಯಪುರ – ಜಗಜ್ಯೋತಿ ಬಸವಣ್ಣ ಮತ್ತು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ವಿಮಾನ ನಿಲ್ದಾಣ ಹೆಸರಿಡುವ ನಿರ್ಣಯ ಕೈಗೊಳ್ಳಲಾಗಿದೆ.
