Kuvempu University ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವವು ಬರುವ ಮೇ 6 ರಂದು ನಡೆದಯಲಿದೆ ಎಂದು ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಹೇಳಿದರು.
ಶಿವಮೊಗ್ಗ: ಮಹಿಳೆಯರು ಸಭೆಗೆ ಹೋಗ್ತಿದ್ದಾಗ ನಡೀತು ಈ ಘಟನೆ, 24 ಗಂಟೆಯಲ್ಲಿ ಇಬ್ಬರ ಬಂಧನ
ಇಂದು ಪತ್ರಿಕಾ ಭವನದಲ್ಲಿ ಸಮಗ್ರ ಮಾಹಿತಿ ನೀಡಿದರು ಸುದ್ದಿಗೋಷ್ಟಿಯಲ್ಲಿಲ್ಲಿ ಮಾತನಾಡಿದ ಅವರು ಇದರಲ್ಲಿ 106 ಪುರುಷರು ಹಾಗೂ 57 ಮಹಿಳಾ ಸಂಶೋಧಕರು ಪಿಹೆಚ್.ಡಿ ಪದವಿಗೆ ಭಾಜನರಾಗಿದ್ದಾರೆ. ಘಟಿಕೋತ್ಸವದ ವೇದಿಕೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಉಪಸ್ಥಿತರಿರಲಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಿದ್ದಾರೆ.
ಈ ವರ್ಷದ ಶೈಕ್ಷಣಿಕ ಸಾಧನೆಯಲ್ಲಿ ಒಟ್ಟು 155 ಸ್ವರ್ಣ ಪದಕಗಳನ್ನು 29 ವಿದ್ಯಾರ್ಥಿಗಳು ಹಂಚಿಕೊಳ್ಳುತ್ತಿರುವುದು ವಿಶೇಷವಾಗಿದೆ. ಎಂ.ಎ ಕನ್ನಡ ವಿಭಾಗದಲ್ಲಿ ಅಭಿಷೇಕ್ ಎಂ.ಎ. ಅವರು 10 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡರೆ, ಎಂ.ಎಸ್ಸಿಯ ಪರಿಸರ ವಿಜ್ಞಾನದಲ್ಲಿ ರಕ್ಷಾ 7 ಪದಕಗಳನ್ನು ಹಾಗೂ ಜೈವಿಕ ತಂತ್ರಜ್ಞಾನದಲ್ಲಿ ಸೃಷ್ಟಿ ಆರ್. 6 ಪದಕಗಳನ್ನು ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಗೌರವ ಡಾಕ್ಟರೇಟ್ ಕುರಿತಾದ ಅಂತಿಮ ನಿರ್ಧಾರವು ಸರ್ಕಾರದ ಹಂತದಲ್ಲಿದ್ದು, ಶೀಘ್ರದಲ್ಲೇ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಕುಲಪತಿಗಳು ತಿಳಿಸಿದ್ದಾರೆ.
ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಉಂಟಾದ ಹಿಂಸಾಚಾರದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಕುಲಪತಿಗಳು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಹಾನಿ ಮಾಡಿರುವುದು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಎಚ್ಚರಿಸಿದರು. ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯು ಕೇವಲ ಪಾರದರ್ಶಕತೆ ಮತ್ತು ಫಲಿತಾಂಶದ ವೇಗಕ್ಕಾಗಿ ಜಾರಿಗೆ ತರಲಾಗಿದ್ದು, ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಪ್ರತಿಭಟನೆಯ ಹಿಂದೆ ಕೆಲವರ ಕುಮ್ಮಕ್ಕಿರುವ ಅನುಮಾನವಿದ್ದು, ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ವಿವರಗಳನ್ನು ಗೌಪ್ಯವಾಗಿಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಇನ್ನು ಅಂಕಪಟ್ಟಿಗಳ ವಿತರಣೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕುಲಸಚಿವರು, ಯುಜಿಸಿ ನಿಯಮದಂತೆ ನಕಲಿ ಅಂಕಪಟ್ಟಿಗಳನ್ನು ತಡೆಗಟ್ಟುವ ಉದ್ದೇಶದಿಂದ ಭೌತಿಕ ಅಂಕಪಟ್ಟಿಗಳ ವಿತರಣೆಯನ್ನು ನಿಲ್ಲಿಸಲಾಗಿದೆ ಎಂದರು. ಕಳೆದ ಮೂರು ವರ್ಷಗಳಿಂದ ಈ ವ್ಯವಸ್ಥೆ ಜಾರಿಯಲ್ಲಿದ್ದು, ವಿದ್ಯಾರ್ಥಿಗಳು ಡಿಜಿ ಲಾಕರ್ ಮೂಲಕವೇ ಅಧಿಕೃತ ಅಂಕಪಟ್ಟಿಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಫಲಿತಾಂಶದ ವಿಳಂಬವನ್ನು ಸರಿಪಡಿಸಲು ಪರೀಕ್ಷಾ ವಿಭಾಗದೊಂದಿಗೆ ಸಭೆ ನಡೆಸಿ, ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಮಾಧ್ಯಮ ಬುಲೆಟಿನ್ ಮೂಲಮಾಹಿತಿಯನ್ನು ಒದಗಿಸುವುದಾಗಿ ಅವರು ಭರವಸೆ ನೀಡಿದರು.
Kuvempu University 35th Convocation May 6

