ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದಲ್ಲಿ KPSC ಮಾದರಿಯಲ್ಲಿ ಭ್ರಷ್ಟಾಚಾರ? ಸಿಐಡಿ ತನಿಖೆಗೆ ಡಿ ಎಸ್ ಅರುಣ್​ ಆಗ್ರಹ

ಹಂಚಿಕೊಳ್ಳಿ
WhatsApp Facebook X Telegram
ಕುವೆಂಪು ವಿಶ್ವವಿದ್ಯಾಲಯದಲ್ಲಿ KPSC ಮಾದರಿಯಲ್ಲಿ ಭ್ರಷ್ಟಾಚಾರ
ಕುವೆಂಪು ವಿಶ್ವವಿದ್ಯಾಲಯದಲ್ಲಿ KPSC ಮಾದರಿಯಲ್ಲಿ ಭ್ರಷ್ಟಾಚಾರ

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡುಟುಡೆ ಸುದ್ದಿ / ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದಲ್ಲಿ ಡಿಜಿಟಲ್ ಫಲಿತಾಂಶ ಪ್ರಕಟಣೆಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದ್ದು, ಈ ಅಕ್ರಮದ ಕುರಿತು ರಾಜ್ಯ ಸರ್ಕಾರ ತಕ್ಷಣವೇ ಸಿಐಡಿ ತನಿಖೆಗೆ ಆದೇಶಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್  ಆಗ್ರಹಿಸಿದ್ದಾರೆ.

ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರುಕಳೆದ ಮೂರೂವರೆ ತಿಂಗಳಿನಿಂದ ವಿಶ್ವವಿದ್ಯಾಲಯದ ಕುಂದುಕೊರತೆಗಳು ಹಾಗೂ ಡಿಜಿಟಲ್ ಫಲಿತಾಂಶದ ಗೊಂದಲಗಳನ್ನು ಸರಿಪಡಿಸಲು ನಿರಂತರವಾಗಿ ಶ್ರಮಿಸುತ್ತಿದ್ದು, ಈ ಕುರಿತು ಆಡಳಿತ ಮಂಡಳಿಗೆ ಪತ್ರ ಬರೆದರೂ ಯಾವುದೇ ಪ್ರತ್ಯುತ್ತರ ಬಂದಿಲ್ಲ. ಈ ವಿಷಯವನ್ನು ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಲು ಮುಂದಾದರೆ, ಸಭೆಯನ್ನೇ ಪದೇ ಪದೇ ಮುಂದೂಡಲಾಗುತ್ತಿದೆ. ಇದರ ಹಿಂದೆ ದೊಡ್ಡ ಮಟ್ಟದ ಷಡ್ಯಂತ್ರ ಅಡಗಿದ್ದು, ಈ ಬಗ್ಗೆ ರಾಜ್ಯಪಾಲರಿಗೂ ದೂರು ಸಲ್ಲಿಸಲಾಗಿದೆ ಎಂದರು.

ವಿಶ್ವವಿದ್ಯಾಲಯದಲ್ಲಿ ಪರೀಕ್ಷಾ ಫಲಿತಾಂಶ ನೀಡದೆ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಕುಲಪತಿಗಳು ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಪರೀಕ್ಷಾ ಶುಲ್ಕಕ್ಕಿಂತಲೂ ಹೆಚ್ಚಿನ ಹಣವನ್ನು ಖರ್ಚು ಮಾಡಲಾಗಿದೆ. ಹಿಂದೆ 5 ಕೋಟಿ ರೂಪಾಯಿಯಲ್ಲಿ ಪೂರ್ಣಗೊಳ್ಳುತ್ತಿದ್ದ ಫಲಿತಾಂಶ ಪ್ರಕ್ರಿಯೆಗೆ ಈಗ 8 ಕೋಟಿ ರೂಪಾಯಿ ಪೋಲು ಮಾಡಿದರೂ ಸರಿಯಾದ ರಿಸಲ್ಟ್ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಕೆಪಿಎಸ್‌ಸಿ (KPSC) ಮಾದರಿಯಲ್ಲೇ ವ್ಯಾಪಕ ಭ್ರಷ್ಟಾಚಾರ ಜರುಗಿದ್ದು, ಕುಲಪತಿಗಳನ್ನು ಈ ಬಗ್ಗೆ ಪ್ರಶ್ನಿಸಿದರೆ ತಮ್ಮ ಮೇಲೆಯೇ ಉಲ್ಟಾ ಆರೋಪ ಮಾಡುತ್ತಿದ್ದಾರೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಈ ಅಕ್ರಮಗಳ ನಿಷ್ಪಕ್ಷಪಾತ ತನಿಖೆಗೆ ಕ್ರಮ ಕೈಗೊಳ್ಳಬೇಕು ಎಂದು ಡಿ.ಎಸ್. ಅರುಣ್ ಒತ್ತಾಯಿಸಿದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor